Psalms 2

ಯೆಹೋವನಿಂದ ಅಭಿಷೇಕಿಸಲ್ಪಟ್ಟವನ ಸರ್ವಾಧಿಪತ್ಯ

1ಅನ್ಯಜನಾಂಗಗಳು ದಂಗೆಗೆ ಏಳುವುದೂ,
ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?
2 ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ.
ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,
3 <<ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ,
ಬೇಡಿಗಳನ್ನು ಮುರಿದು ಬಿಸಾಡೋಣ>> ಎಂದು ಮಾತನಾಡಿಕೊಳ್ಳುತ್ತಾರಲ್ಲಾ.

4

ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು;

ಕರ್ತನು ಅವರನ್ನು ಪರಿಹಾಸ್ಯಮಾಡುವನು.
5 ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ,

6

<<ನಾನು ನೇಮಿಸಿದ ಅರಸನನ್ನು

ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು>> ಎಂದು ಹೇಳುವನು.
7 ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ;
ಆತನು ನನಗೆ, <<ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.

8

ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು;

ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವಾಸ್ತ್ಯವಾಗಿ ಕೊಡುವೆನು.
9 ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ;
ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ>> ಎಂದು ಹೇಳಿದನು.


10

ಆದುದರಿಂದ ಅರಸುಗಳಿರಾ, ವಿವೇಕಿಗಳಾಗಿರ್ರಿ;

ದೇಶಾಧಿಪತಿಗಳಿರಾ, ಬುದ್ಧಿವಾದಕ್ಕೆ ಕಿವಿಗೊಡಿರಿ.
11 ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ;
ನಡುಗುತ್ತಾ ಉಲ್ಲಾಸಪಡಿರಿ.

12

ಆತನ ಮಗನಿಗೆ ಮುದ್ದಿಡಿರಿ;

ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ.
ಆತನನ್ನು ಆಶ್ರಯಿಸುವವರೆಲ್ಲರು ಧನ್ಯರು.

Copyright information for KanULB