Psalms 1

ಪ್ರಥಮ ಭಾಗವು (1 – 41)

ಸನ್ಮಾರ್ಗಸ್ಥರು ಮತ್ತು ದುರ್ಮಾರ್ಗಸ್ಥರು

(ಯೆರೆ. 17:5-8; ಮತ್ತಾ. 7:13,14)


1ಯಾರು ದುಷ್ಟರ ಆಲೋಚನೆಯಂತೆ ನಡೆಯದೆ,

ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ,
ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,
2 ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ,
ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು.

3

ನೀರಿನ ಕಾಲಿವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು.

ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ.
ಅದರ ಎಲೆ ಬಾಡುವುದೇ ಇಲ್ಲ.
ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.

4

ದುಷ್ಟರೋ ಹಾಗಲ್ಲ;

ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ.
5 ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ,
ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ.

6

ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು;

ದುಷ್ಟರ ಮಾರ್ಗವೋ ನಾಶವಾಗುವುದು.

Copyright information for KanULB