Psalms 114

ಇಸ್ರಾಯೇಲರ ರಕ್ಷಕನ ಮಹತ್ವ

1ಇಸ್ರಾಯೇಲರು ಐಗುಪ್ತ ದೇಶವನ್ನೂ,
ಯಾಕೋಬನ ಮನೆತನದವರು ಅನ್ಯಜನಾಂಗವನ್ನು ಬಿಟ್ಟ ಮೇಲೆ,
2 ಯೆಹೂದವು ದೇವರ ಪರಿಶುದ್ಧ ವಾಸಸ್ಥಾನವೂ,
ಇಸ್ರಾಯೇಲ್ ಆತನ ರಾಜ್ಯವೂ ಆಯಿತು.

3

ಸಮುದ್ರವು ಕಂಡು ಓಡಿಹೋಯಿತು;

ಯೊರ್ದನ್ ಹೊಳೆಯು ಹಿಂದಿರುಗಿತು.
4 ಪರ್ವತಗಳು ಟಗರುಗಳಂತೆಯೂ,
ಗುಡ್ಡಗಳು ಕುರಿಮರಿಗಳಂತೆಯೂ ಹಾರಾಡಿದವು.

5

ಸಮುದ್ರವೇ, ನಿನಗೇನಾಯಿತು? ಏಕೆ ಓಡಿ ಹೋಗುತ್ತೀ?

ಯೊರ್ದನೇ, ಏಕೆ ಹಿಂದಿರುಗುತ್ತೀ?
6 ಪರ್ವತಗಳೇ, ನೀವು ಟಗರುಗಳಂತೆಯೂ,
ಗುಡ್ಡಗಳೇ, ನೀವು ಕುರಿಮರಿಗಳಂತೆಯೂ ಏಕೆ ಹಾರಾಡುತ್ತೀರಿ?
7 ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ,
ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು.

8

ಆತನು ಬಂಡೆಯನ್ನು ಕೆರೆಯನ್ನಾಗಿಯೂ,

ಶಿಲೆಯನ್ನು ಬುಗ್ಗೆಯನ್ನಾಗಿಯೂ ಮಾರ್ಪಡಿಸುತ್ತಾನೆ.

Copyright information for KanULB