Psalms 119

ಧರ್ಮಶಾಸ್ತ್ರದ ಮಹತ್ವವನ್ನು ವರ್ಣಿಸುವ ಇಬ್ರಿಯ ಅಕ್ಷರ ಕ್ರಮಾನುಸಾರವಾದ ಕೀರ್ತನೆ

(ಕೀರ್ತ. 19:7-11)

ಆಲೆಫ್.

ಧರ್ಮಶಾಸ್ತ್ರದ ಅನುಕರಣೆ

1ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ,
ಸದಾಚಾರಿಗಳಾಗಿ ನಡೆಯುವವರು ಧನ್ಯರು.
2 ಆತನ ಕಟ್ಟಳೆಗಳನ್ನು ಕೈಕೊಂಡು,
ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.

3

ಅವರು ಆತನ ಮಾರ್ಗದಲ್ಲಿ ನಡೆಯುತ್ತಾರೆ,

ಅನ್ಯಾಯ ಮಾಡುವುದೇ ಇಲ್ಲ.
4 ನಿನ್ನ ನಿಯಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡೆಸಬೇಕೆಂದು,
ನೀನೇ ಆಜ್ಞಾಪಿಸಿರುತ್ತಿ.

5

ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವುದರಲ್ಲಿ,

ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇಯದು!
6 ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ,
ನಾನು ಅಪಮಾನಕ್ಕೆ ಗುರಿಯಾಗುವುದಿಲ್ಲ.

7

ನಾನು ನಿನ್ನ ನೀತಿಯ ವಿಧಿಗಳನ್ನು ಕಲಿತಹಾಗೆಲ್ಲಾ,

ನಿನ್ನನ್ನು ಯಥಾರ್ಥ ಹೃದಯದಿಂದ ಕೊಂಡಾಡುತ್ತಾ ಹೋಗುವೆನು.
ನಿನ್ನ ಕಟ್ಟಳೆಗಳನ್ನು ಅನುಸರಿಸುವ ನನ್ನನ್ನು,
ಸಂಪೂರ್ಣವಾಗಿ ಕೈಬಿಡಬೇಡ.

ಬೇತ್.

8

ಉಪದೇಶಯುಕ್ತವಾದ ಯೆಹೋವನ ಕಟ್ಟಳೆಗಳು


9

ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ?

ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.
10 ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ,
ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.

11

ನಿನಗೆ ವಿರುದ್ಧವಾಗಿ ಪಾಪಮಾಡದಂತೆ,

ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.
12 ಸ್ತುತಿಪಾತ್ರನಾದ ಯೆಹೋವನೇ,
ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.

13

ನಿನ್ನ ಎಲ್ಲಾ ಉಪದೇಶಾಜ್ಞೆಗಳನ್ನು,

ನನ್ನ ತುಟಿಗಳು ವರ್ಣಿಸುತ್ತವೆ.
14 ಸರ್ವಸಂಪತ್ತಿನಲ್ಲಿ ಹೇಗೋ,
ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ.

15

ನಿನ್ನ ನಿಯಮಗಳನ್ನು ಧ್ಯಾನಿಸುತ್ತಾ,

ನಿನ್ನ ದಾರಿಯನ್ನು ಲಕ್ಷಿಸುವೆನು.
ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು,
ನಿನ್ನ ವಾಕ್ಯವನ್ನು ಮರೆಯುವುದಿಲ್ಲ.

ಗಿಮೆಲ್.

16

ದೇವರಾಜ್ಞೆಗಳಲ್ಲಿ ಸಂತೋಷಿಸುವುದು


17

ನಿನ್ನ ಸೇವಕನಾದ ನನ್ನ ಮೇಲೆ ದಯವಿಡು,

ಆಗ ಜೀವದಿಂದಿದ್ದು ನಿನ್ನ ವಾಕ್ಯವನ್ನು ಕೈಗೋಳ್ಳುವೆನು.
18 ನನ್ನ ಕಣ್ಣುಗಳನ್ನು ತೆರೆ,
ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.

19

ನಾನು ಭೂಲೋಕದಲ್ಲಿ ಪ್ರವಾಸಿಯಾಗಿದ್ದೇನೆ,

ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ.
20 ಯಾವಾಗಲೂ ನಿನ್ನ ವಿಧಿಗಳನ್ನೇ ಹಂಬಲಿಸುತ್ತಿರುವ
ನನ್ನ ಪ್ರಾಣವು ಜಜ್ಜಿಹೋಗಿದೆ.

21

ನೀನು ಗರ್ವಿಷ್ಠರನ್ನು ಗದರಿಸುತ್ತಿ,

ನಿನ್ನ ಆಜ್ಞೆಗಳನ್ನು ಮೀರಿದವರು ಶಾಪಗ್ರಸ್ತರು.
22 ನಿನ್ನ ಕಟ್ಟಳೆಗಳನ್ನು ಕೈಕೊಂಡವನಾದರಿಂದ,
ನನಗಿರುವ ನಿಂದೆ, ಅಪಮಾನಗಳನ್ನು ತೊಲಗಿಸು.

23

ಪ್ರಭುಗಳು ಕುಳಿತುಕೊಂಡು,

ನನಗೆ ವಿರುದ್ಧವಾಗಿ ಒಳಸಂಚು ಮಾಡಿದರೂ,
ನಿನ್ನ ಸೇವಕನು ನಿನ್ನ ನಿಬಂಧನೆಗಳನ್ನೇ ಧ್ಯಾನಿಸುತ್ತಿರುವನು.
ನಿನ್ನ ಕಟ್ಟಳೆಗಳು ನನ್ನ ಪರಮಾನಂದ,
ಅವೇ ನನ್ನ ಮಾರ್ಗದರ್ಶನ.

ದಾಲಿತ್.

24

ಆಜ್ಞಾಮಾರ್ಗದಲ್ಲಿ ನಡೆಯುವ ನಿರ್ಧಾರ


25

ನನ್ನ ಪ್ರಾಣವು ಧೂಳಿನಲ್ಲಿ ಸೇರಿಹೋಗುತ್ತದೆ,

ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.
26 ನನ್ನ ಯಾತ್ರಾನುಭವವನ್ನು ನಿನಗೆ ಹೇಳಿಕೊಂಡಾಗ,
ನನಗೆ ಸದುತ್ತರವನ್ನು ದಯಪಾಲಿಸಿದಿ,
ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.

27

ನಿನ್ನ ನಿಯಮಗಳ ದಾರಿಯನ್ನು ತಿಳಿಯಪಡಿಸು,

ಆಗ ನಿನ್ನ ಅದ್ಭುತಕೃತ್ಯಗಳನ್ನು ಧ್ಯಾನಿಸುವೆನು.
28 ಮನೋವ್ಯಥೆಯಿಂದ ಕಣ್ಣೀರು ಸುರಿಸುತ್ತೇನೆ,
ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಬಲಪಡಿಸು.

29

ತಪ್ಪಾದ ಮಾರ್ಗವನ್ನು ನನ್ನಿಂದ ದೂರಮಾಡು,

ನಿನ್ನ ಧರ್ಮಶಾಸ್ತ್ರವನ್ನು ನನಗೆ ಅನುಗ್ರಹಿಸು.
30 ಭಕ್ತಿಮಾರ್ಗವನ್ನು ಆರಿಸಿಕೊಂಡಿದ್ದೇನೆ,
ನಿನ್ನ ವಿಧಿಗಳನ್ನು ನನ್ನ ಮುಂದೆಯೇ ಇಟ್ಟುಕೊಂಡಿದ್ದೇನೆ.

31

ನಾನು ನಿನ್ನ ಕಟ್ಟಳೆಗಳನ್ನು ಅಪ್ಪಿಕೊಂಡಿದ್ದೇನೆ,

ಯೆಹೋವನೇ, ನನಗೆ ಆಶಾಭಂಗಪಡಿಸಬೇಡ.
ನೀನು ನನ್ನ ಅಂತರಾತ್ಮವನ್ನು ವಿಮೋಚಿಸು,
ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು.

ಹೇ.

32

ಮಾರ್ಗದರ್ಶನಕ್ಕಾಗಿ ಪ್ರಾರ್ಥನೆ


33

ಯೆಹೋವನೇ, ನಿನ್ನ ಕಟ್ಟಳೆಗಳ

ಮಾರ್ಗವನ್ನು ನನಗೆ ಉಪದೇಶಿಸು,
ಕಡೆಯವರೆಗೂ ಅದನ್ನೇ ಅನುಸರಿಸಿ ನಡೆಯುವೆನು.
34 ನನಗೆ ತಿಳಿವಳಿಕೆಯನ್ನು ದಯಪಾಲಿಸು,
ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.

35

ನಿನ್ನ ಆಜ್ಞಾಮಾರ್ಗದಲ್ಲಿ ನನ್ನನ್ನು ನಡೆಸು,

ಅದೇ ನನ್ನ ಇಷ್ಟ.
36 ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ,
ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಸು.

37

ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು,

ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು.
38 ನಿನ್ನಲ್ಲಿ ಭಯಭಕ್ತಿಯುಳ್ಳವರಿಗಾಗಿ ನೀನು ಮಾಡಿದ ವಾಗ್ದಾನಗಳನ್ನು,
ನಿನ್ನ ಸೇವಕನ ವಿಷಯದಲ್ಲಿ ನೆರವೇರಿಸು.

39

ನನ್ನ ಅವಮಾನವನ್ನು ತೊಲಗಿಸು,

ಅದಕ್ಕೋಸ್ಕರ ಅಂಜುತ್ತಿದ್ದೇನೆ.
ನಿನ್ನ ಕಟ್ಟಳೆಗಳು ಹಿತಕರವಾಗಿವೆ.
ಇಗೋ, ನಿನ್ನ ನಿಯಮಗಳನ್ನು ಪ್ರೀತಿಸುತ್ತೇನೆ,
ನಿನ್ನ ನೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.

ವಾವ್.

40

ಭರವಸಕ್ಕೆ ಆಧಾರವಾದ ದೇವರ ಕಟ್ಟಳೆಗಳು


41

ಯೆಹೋವನೇ, ನಿನ್ನ ಕೃಪೆಯು ನನಗೆ ದೊರಕಲಿ,

ನಿನ್ನ ನುಡಿಗನುಸಾರವಾಗಿ ನನಗೆ ರಕ್ಷಣೆಯುಂಟಾಗಲಿ.
42 ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು,
ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನಲ್ಲಾ.

43

ಸತ್ಯ ವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ.

ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿಕೊಂಡಿದ್ದೇನೆ.
44 ನಿನ್ನ ಧರ್ಮಶಾಸ್ತ್ರವನ್ನು ಸದಾ ತಪ್ಪದೆ ಕೈಗೋಳ್ಳುವೆನು.

45

ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ,

ಸರಾಗವಾಗಿ ನಡೆಯುವೆನು.
46 ನಿನ್ನ ಕಟ್ಟಳೆಗಳ ವಿಷಯವಾಗಿ,
ಅರಸುಗಳ ಮುಂದೆಯೂ ಮಾತನಾಡುವೆನು,
ನಾಚಿಕೆಪಡುವುದಿಲ್ಲ.

47

ನಿನ್ನ ಆಜ್ಞೆಗಳಲ್ಲಿ ಆನಂದಪಡುತ್ತೇನೆ,

ಅವು ನನಗೆ ಇಷ್ಟವಾಗಿವೆ.
ನಿನ್ನ ಆಜ್ಞೆಗಳನ್ನು ಗೌರವಿಸುತ್ತೇನೆ,
ಅವುಗಳನ್ನು ನಾನು ಪ್ರೀತಿಸುತ್ತೇನೆ,
ನಿನ್ನ ನಿಬಂಧನೆಗಳನ್ನು ಧ್ಯಾನಿಸುತ್ತೇನೆ.

ಸಾಯಿನ್.

48

ಚೈತನ್ಯಗೊಳಿಸುವ ಯೆಹೋವನ ನುಡಿ


49

ನಿನ್ನ ವಾಗ್ದಾನವನ್ನು ನಿನ್ನ ಸೇವಕನಿಗೋಸ್ಕರ ನೆನಪುಮಾಡಿಕೋ,

ನನ್ನಲ್ಲಿ ನಿರೀಕ್ಷೆಯನ್ನು ಹುಟ್ಟಿಸಿದ್ದಿಯಲ್ಲಾ!
50 ನಿನ್ನ ನುಡಿಯು ನನ್ನನ್ನು ಚೈತನ್ಯಗೊಳಿಸುತ್ತದೆ,
ಆಪತ್ಕಾಲದಲ್ಲಿ ಇದೇ ನನಗೆ ಆದರಣೆ.

51

ಗರ್ವಿಷ್ಠರು ನನ್ನನ್ನು ಬಹಳವಾಗಿ ಅಪಹಾಸ್ಯ ಮಾಡಿದರು,

ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ.
52 ಯೆಹೋವನೇ, ನಿನ್ನ ಪುರಾತನ ಉಪದೇಶಾಜ್ಞೆಗಳನ್ನು ನೆನಪುಮಾಡಿಕೊಂಡು,
ನನ್ನನ್ನು ಸಂತೈಸಿಕೊಂಡಿದ್ದೇನೆ.

53

ನಿನ್ನ ಧರ್ಮಶಾಸ್ತ್ರ ಭ್ರಷ್ಟರಾದ ದುಷ್ಟರಿಗಾಗಿ, ಕೋಪಗೊಂಡಿದ್ದೇನೆ.

54 ನನ್ನ ಪ್ರವಾಸದ ಮನೆಯಲ್ಲಿ
ನಿನ್ನ ಕಟ್ಟಳೆಗಳು ನನಗೆ ಗಾಯನವಾದವು.

55

ಯೆಹೋವನೇ, ರಾತ್ರಿಯಲ್ಲಿ ನಿನ್ನ ನಾಮವನ್ನು ಸ್ಮರಿಸಿಕೊಳ್ಳುತ್ತೇನೆ,

ನಿನ್ನ ಧರ್ಮಶಾಸ್ತ್ರವನ್ನು ಕೈಗೋಳ್ಳುತ್ತೇನೆ.
ನಿನ್ನ ನಿಯಮಗಳನ್ನು ಅನುಸರಿಸಿದ್ದರಿಂದ ಇದೆಲ್ಲಾ ನನಗೆ ಲಭಿಸಿತು.

ಹೇತ್.

56

ಯೆಹೋವನ ನೀತಿವಿಧಿಗಳಲ್ಲಿ ಆಸಕ್ತಿ


57

ಯೆಹೋವನೇ, ನನ್ನ ಪಾಲು ನೀನೇ,

ನಿನ್ನ ವಾಕ್ಯಗಳನ್ನು ಕೈಗೊಳ್ಳುವೆನೆಂದು ನಿರ್ಣಯಿಸಿಕೊಂಡಿದ್ದೇನೆ.
58 ಪೂರ್ಣಮನಸ್ಸಿನಿಂದ ನಿನ್ನ ದಯೆಯನ್ನು ಅಪೇಕ್ಷಿಸಿದ್ದೇನೆ,
ನಿನ್ನ ನುಡಿಗನುಸಾರವಾಗಿ ನನಗೆ ಪ್ರಸನ್ನನಾಗು.

59

ನನ್ನ ನಡತೆಯನ್ನು ಶೋಧಿಸಿದೆನು,

ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ.
60 ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು,
ಆಲಸ್ಯಮಾಡಲಿಲ್ಲ.

61

ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು,

ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆಯಲಿಲ್ಲ.
62 ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡಲು,
ಮಧ್ಯರಾತ್ರಿಯಲ್ಲಿ ಏಳುವೆನು.

63

ನಿನ್ನ ನಿಯಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ

ನಾನು ಸಂಗಡಿಗನು.
ಯೆಹೋವನೇ, ಭೂಲೋಕವು ನಿನ್ನ ಶಾಶ್ವತ ಪ್ರೀತಿಯಿಂದ ತುಂಬಿದೆ,
ನಿನ್ನ ಕಟ್ಟಳೆಗಳನ್ನು ನನಗೆ ಬೋಧಿಸು.

ಟೇತ್.

64

ದೇವರಾಜ್ಞೆಗಳ ಮೌಲ್ಯ


65

ಯೆಹೋವನೇ, ನೀನು ನಿನ್ನ ವಾಗ್ದಾನಕ್ಕೆ ತಕ್ಕಂತೆ,

ನಿನ್ನ ಸೇವಕನಿಗೆ ಮಹೋಪಕಾರ ಮಾಡಿದ್ದಿ.
66 ಸುಜ್ಞಾನವನ್ನು, ವಿವೇಕಗಳನ್ನು ನನಗೆ ಕಲಿಸಿಕೊಡು,
ನಿನ್ನ ಆಜ್ಞೆಗಳನ್ನು ನಂಬಿಕೊಂಡಿದ್ದೇನಲ್ಲಾ.

67

ಕಷ್ಟಾನುಭವಕ್ಕಿಂತ ಮೊದಲೆ ತಪ್ಪಿಹೋಗುತ್ತಿದ್ದೆನು,

ಈಗಲಾದರೋ ನಿನ್ನ ನುಡಿಗಳನ್ನು ಕೈಗೊಳ್ಳುತ್ತೇನೆ.
68 ನೀನು ಒಳ್ಳೆಯವನು, ಒಳ್ಳೆಯದನ್ನು ಮಾಡುವವನೂ ಆಗಿದ್ದಿ,
ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು.

69

ಗರ್ವಿಷ್ಠರು ನನ್ನ ವಿರುದ್ಧವಾಗಿ ಸುಳ್ಳುಕಲ್ಪಿಸಿದ್ದಾರೆ,

ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
70 ಕೊಬ್ಬಿನಂತೆ ಅವರ ಬುದ್ಧಿ ಮಂದವಾಯಿತು,
ನಾನಾದರೋ ನಿನ್ನ ಧರ್ಮಶಾಸ್ತ್ರದಲ್ಲಿ ಉಲ್ಲಾಸಪಡುತ್ತೇನೆ.

71

ಕಷ್ಟಾನುಭವವು ಹಿತಕರವಾಯಿತು,

ಅದುದರಿಂದಲೇ ನಿನ್ನ ನಿಬಂಧನೆಗಳನ್ನು ಕಲಿತೆನು.
ನೀನು ಕೊಟ್ಟ ಧರ್ಮಶಾಸ್ತ್ರವು,
ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ.

ಯೋದ್.

72

ನ್ಯಾಯಬದ್ಧವಾದ ಕಟ್ಟಳೆಗಳು


73

ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು,

ನಿನ್ನ ಆಜ್ಞೆಗಳನ್ನು ಕಲಿಯುವುದಕ್ಕೆ ನನಗೆ ಬುದ್ಧಿಯನ್ನು ಕೊಡು.
74 ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನನ್ನು ನೋಡಿ ಸಂತೋಷಿಸಲಿ,
ನಾನು ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನಲ್ಲಾ.

75

ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ,

ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.
76 ನಿನ್ನ ಸೇವಕನಿಗೆ ನುಡಿದ ಪ್ರಕಾರ,
ನನ್ನ ಸಮಾಧಾನಕ್ಕೋಸ್ಕರ ಕೃಪೆಯನ್ನು ದಯಪಾಲಿಸು.

77

ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ,

ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ.
78 ಗರ್ವಿಷ್ಠರು ಮಾನಭಂಗ ಹೊಂದಲಿ,
ಅವರು ಮೋಸದಿಂದ ನನಗೆ ಕೇಡು ಮಾಡಿದ್ದಾರೆ.
ನಾನಾದರೋ ನಿನ್ನ ನಿಯಮಗಳನ್ನು ಧ್ಯಾನಿಸುತ್ತಿರುವೆನು.

79

ನಿನ್ನಲ್ಲಿ ಭಯಭಕ್ತಿಯುಳ್ಳವರು ನನ್ನ ಕಡೆಗೆ ತಿರುಗಿಕೊಂಡು,

ನಿನ್ನ ಕಟ್ಟಳೆಗಳನ್ನು ಗ್ರಹಿಸಿಕೊಳ್ಳಲಿ.
ನನ್ನ ಮನಸ್ಸು ನಿನ್ನ ಕಟ್ಟಳೆಗಳಲ್ಲಿ ಆಸಕ್ತವಾಗಲಿ,
ಆಗ ನನ್ನ ಆಶಾಭಂಗಕ್ಕೆ ಕಾರಣವಿರುವುದಿಲ್ಲ.

ಕಾಫ್.

80

ವಿಮೋಚನೆಗಾಗಿ ವಿಜ್ಞಾಪನೆ


81

ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು,

ನಾನು ನಿನ್ನ ವಾಕ್ಯದಲ್ಲೇ ನಿರೀಕ್ಷೆಯುಳ್ಳವನಾಗಿದ್ದೇನೆ.
82 ನಿನ್ನ ನುಡಿಯನ್ನು ನೆರವೇರಿಸಿ ಯಾವಾಗ ನನ್ನನ್ನು ಸಂತೈಸುವಿ?
ಎಂಬುವುದಕ್ಕೋಸ್ಕರವೇ ನನ್ನ ದೃಷ್ಟಿಯು ಮಂದವಾಯಿತು.

83

ಹೊಗೆಯಲ್ಲಿ ನೇತು ಹಾಕಿರುವ ಬುದ್ದಲಿಯಂತಿದ್ದೇನೆ,

ಆದರೂ ನಿನ್ನ ನಿಬಂಧನೆಗಳನ್ನು ಮರೆಯಲಿಲ್ಲ.
84 ನಿನ್ನ ಸೇವಕನ ದಿನಗಳು ಬಹುಸ್ವಲ್ಪವಲ್ಲಾ!
ನನ್ನನ್ನು ಬಾಧಿಸುವವರಿಗೆ ಶಿಕ್ಷೆ ವಿಧಿಸುವುದು ಯಾವಾಗ?

85

ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರು

ನನಗಾಗಿ ಗುಂಡಿಗಳನ್ನು ತೋಡಿದ್ದಾರೆ.
86 ನಿನ್ನ ಆಜ್ಞೆಗಳೆಲ್ಲಾ ಸ್ಥಿರವಾಗಿವೆ,
ಅವರು ಮೋಸದಿಂದ ಹಿಂಸಿಸುತ್ತಾರೆ,
ನನಗೆ ಸಹಾಯಮಾಡು.

87

ನನ್ನನ್ನು ಭೂಮಿಯಿಂದ ತೆಗೆದೇಬಿಟ್ಟಿದ್ದರು,

ಆದರೆ ನಾನು ನಿನ್ನ ನಿಯಮಗಳನ್ನು ಬಿಡಲೇ ಇಲ್ಲ.
ನಿನ್ನ ಕೃಪೆಗೆ ಅನುಸಾರವಾಗಿ ನನ್ನನ್ನು ಚೈತನ್ಯಗೊಳಿಸು,
ಆಗ ನೀನು ಆಜ್ಞಾಪಿಸಿದ ಕಟ್ಟಳೆಯನ್ನು ಕೈಕೊಳ್ಳವೆನು.

ಲಾಮೆದ್.

88

ಘನವಾದ ಆಜ್ಞಾಶಾಸನ


89

ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟಿದೆ.

90 ನಿನ್ನ ಸತ್ಯವು ತಲತಲಾಂತರಕ್ಕೂ ಇರುವುದು.
ನೀನು ಭೂಮಿಯನ್ನು ಸ್ಥಾಪಿಸಿರುತ್ತಿ, ಅದು ಕದಲುವುದಿಲ್ಲ.

91

ನಿನ್ನ ವಿಧಿಗಳಿಗನುಸಾರವಾಗಿ ಅವು ಇಂದಿನವರೆಗೂ,

ಸ್ಥಿರವಾಗಿ ನಿಂತಿರುತ್ತವೆ.
ಏಕೆಂದರೆ ಸರ್ವವಸ್ತುಗಳೂ ನಿನ್ನ ಸೇವೆ ಮಾಡುತ್ತವೆ.
92 ನಿನ್ನ ಧರ್ಮಶಾಸ್ತ್ರವು ನನಗೆ ಆನಂದಕರವಾಗದಿದ್ದರೆ,
ನನಗೊದಗಿದ ಆಪತ್ತಿನಲ್ಲಿ ಹಾಳಾಗಿ ಹೋಗುತ್ತಿದ್ದೆನು.

93

ನಾನು ನಿನ್ನ ನಿಯಮಗಳನ್ನು ಎಂದಿಗೂ ಮರೆಯುವುದಿಲ್ಲ,

ಅವುಗಳಿಂದಲೇ ನನ್ನನ್ನು ಬದುಕಿಸಿದ್ದಿ.
94 ನಾನು ನಿನ್ನವನು, ರಕ್ಷಿಸು,
ನಿನ್ನ ನಿಯಮಗಳಲ್ಲಿ ಆಸಕ್ತನಾಗಿದ್ದೇನಲ್ಲಾ.

95

ದುಷ್ಟರು ನನ್ನನ್ನು ಸಂಹರಿಸಬೇಕೆಂದು ಹೊಂಚಿ ನೋಡುತ್ತಾರೆ,

ನಾನು ನಿನ್ನ ಕಟ್ಟಳೆಗಳನ್ನೇ ಲಕ್ಷಿಸಿಕೊಂಡಿರುವೆನು.
ಎಲ್ಲಾ ಸಂಪೂರ್ಣತೆಗೂ ಮೇರೆಯುಂಟೆಂದು ಬಲ್ಲೆನು,
ಆದರೆ ನಿನ್ನ ಆಜ್ಞಾಶಾಸನವು ಅಪಾರವಾದದ್ದು.

ಮೆಮ್.

96

ಜ್ಞಾನವಂತರನ್ನಾಗಿ ಮಾಡುವ ಧರ್ಮಶಾಸ್ತ್ರ


97

ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ,

ದಿನವೆಲ್ಲಾ ಅದೇ ನನ್ನ ಧ್ಯಾನ.
98 ನಿನ್ನ ಆಜ್ಞೆಗಳ ಮೂಲಕ ನನ್ನ ವೈರಿಗಳಿಗಿಂತ ಬುದ್ಧಿವಂತನಾಗಿದ್ದೇನೆ,
ಸದಾಕಾಲವೂ ಅವೇ ನನಗಿವೆ.

99

ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವುದರಿಂದ,

ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.
100 ನಿನ್ನ ನಿಯಮಗಳನ್ನು ಕೈ ಗೊಂಡಿರುವುದರಿಂದ,
ಹಿರಿಯರಿಗಿಂತ ವಿವೇಕಿಯಾಗಿದ್ದೇನೆ.

101

ನಿನ್ನ ವಾಕ್ಯವನ್ನೇ ಅನುಸರಿಸಬೇಕೆಂದು,

ನನ್ನ ಕಾಲುಗಳನ್ನು ಯಾವ ಕೆಟ್ಟ ದಾರಿಗೂ ಹೋಗದಂತೆ ಕಾದಿದ್ದೇನೆ.
102 ನಾನು ನಿನ್ನ ವಿಧಿಗಳಿಂದ ಸ್ವಲ್ಪವೂ ತಪ್ಪಿಹೋಗಲಿಲ್ಲ,
ಏಕೆಂದರೆ ನೀನು ನನಗೆ ಬೋಧಿಸಿದ್ದೀ.

103

ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ,

ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.
ನಿನ್ನ ನಿಯಮಗಳ ಮೂಲಕ ವಿವೇಕಿಯಾದೆನು,
ಸುಳ್ಳು ಮಾರ್ಗವನ್ನೆಲ್ಲಾ ನಾನು ದ್ವೇಷಿಸುತ್ತೇನೆ.

ನೂನ್.

104

ದೇವರ ವಾಕ್ಯ ಕಾಲಿಗೆ ದೀಪ, ದಾರಿಗೆ ಬೆಳಕು


105

ನಿನ್ನ ವಾಕ್ಯವು ನನ್ನ ಕಾಲಿಗೆ ದೀಪವೂ,

ನನ್ನ ದಾರಿಗೆ ಬೆಳಕೂ ಆಗಿದೆ.
106 ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ,
ಅದನ್ನು ನೆರವೇರಿಸುವೆನು.

107

ನಾನು ಬಹಳವಾಗಿ ಕುಗ್ಗಿಹೋಗಿದ್ದೇನೆ,

ಯೆಹೋವನೇ, ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
108 ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು,
ದಯವಿಟ್ಟು ಅಂಗೀಕರಿಸು,
ನಿನ್ನ ವಿಧಿಗಳನ್ನು ನನಗೆ ಕಲಿಸು.

109

ನಾನು ಯಾವಾಗಲೂ ನನ್ನ ಜೀವವನ್ನು ಕೈಯಲ್ಲೇ ಹಿಡಿದಿದ್ದೇನೆ,

ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವುದಿಲ್ಲ.
110 ದುಷ್ಟರು ಬಲೆಯೊಡ್ಡಿದ್ದಾರೆ,
ನಾನು ನಿನ್ನ ನಿಯಮಗಳಿಂದ ತಪ್ಪಿಹೋಗುವುದಿಲ್ಲ.

111

ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವಾಸ್ತ್ಯವನ್ನಾಗಿ ಆರಿಸಿಕೊಂಡಿದ್ದೇನೆ,

ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.
ಕಡೇಯವರೆಗು ಯಾವಾಗಲೂ ನಿನ್ನ ನಿಬಂಧನೆಗಳನ್ನು ಕೈಗೊಳ್ಳುವುದಕ್ಕೆ ಮನಸ್ಸುಮಾಡಿದ್ದೇನೆ.

ಸಾಮೆಕ್.

112

ಆಶ್ರಯವಾಗಿರುವ ದೇವರಾಜ್ಞೆಗಳು


113

ಚಂಚಲ ಮನಸ್ಸುಳ್ಳವರನ್ನು ದ್ವೇಷಿಸುತ್ತೇನೆ,

ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುತ್ತೇನೆ.
114 ನನ್ನ ಆಶ್ರಯವೂ, ಗುರಾಣಿಯೂ ನೀನೇ,
ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನೆ.

115

ದುಷ್ಟರೇ, ತೊಲಗಿರಿ,

ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು.
116 ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು,
ಆಗ ಬದುಕುವೆನು. ನಾನು ನಿರೀಕ್ಷೆಯುಳ್ಳವನಾಗಿದ್ದೇನೆ,
ನನ್ನನ್ನು ನಿರಾಶೆಪಡಿಸಬೇಡ.

117

ನೀನು ನನಗೆ ಆಧಾರವಾಗಿರು,

ಆಗ ನಾನು ಸುರಕ್ಷಿತನಾಗಿ ಸದಾ ನಿನ್ನ ನಿಬಂಧನೆಗಳನ್ನು ಲಕ್ಷಿಸುವೆನು.
118 ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ,
ಅವರ ಕುಯುಕ್ತಿಯು ವ್ಯರ್ಥವಾದದ್ದೇ.

119

ಭೂಲೋಕದ ದುಷ್ಟರೆಲ್ಲರನ್ನು ಕಸದಂತೆ ತೆಗೆದುಬಿಡುತ್ತೀ,

ಆದುದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ.
ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ,
ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ.

ಆಯಿನ್.

120

ಅಪರಂಜಿಗಿಂತಲೂ ಶ್ರೇಷ್ಠವಾದ ದೇವರ ವಾಕ್ಯಗಳು


121

ನಾನು ನಿನ್ನ ನೀತಿವಿಧಿಗಳನ್ನು ಅನುಸರಿಸಿದ್ದೇನೆ,

ಬಲಾತ್ಕಾರಿಗಳಿಗೆ ನನ್ನನ್ನು ಒಪ್ಪಿಸಬೇಡ.
122 ನಿನ್ನ ಸೇವಕನ ಮೇಲಿಗಾಗಿ ನೀನು ಹೊಣೆಗಾರನಾಗು,
ಗರ್ವಿಷ್ಠರು ನನ್ನನ್ನು ಬಾಧಿಸದಿರಲಿ.

123

ನಿನ್ನ ರಕ್ಷಣೆಯನ್ನೂ, ನಿನ್ನ ನೀತಿಯುಳ್ಳ ನುಡಿಯು ನೆರವೇರುವುದನ್ನೂ ನಿರೀಕ್ಷಿಸುತ್ತಾ,

ನನ್ನ ದೃಷ್ಟಿ ಮೊಬ್ಬಾಯಿತು.
124 ನಿನ್ನ ಸೇವಕನನ್ನು ಕೃಪೆಯಿಂದ ನಡೆಸು,
ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.

125

ನಾನು ನಿನ್ನ ಸೇವಕನು,

ನಿನ್ನ ಕಟ್ಟಳೆಗಳನ್ನು ತಿಳಿದುಕೊಳ್ಳುವಂತೆ ವಿವೇಕವನ್ನು ದಯಪಾಲಿಸು.
126 ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ,
ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ.

127

ನಿಜವಾಗಿ ನಿನ್ನ ಆಜ್ಞೆಗಳು ಬಂಗಾರಕ್ಕಿಂತಲೂ,

ಅಪರಂಜಿಗಿಂತಲೂ ನನಗೆ ಬಹುಪ್ರಿಯವಾಗಿವೆ.
ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ,
ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ.

ಪೆ.

128

ಕಟ್ಟಳೆಗಳನ್ನು ಪಾಲಿಸುವ ತವಕ


129

ನಿನ್ನ ಕಟ್ಟಳೆಗಳು ಮಹತ್ವವುಳ್ಳವುಗಳೇ,

ಪೂರ್ಣಹೃದಯದಿಂದ ಅವುಗಳನ್ನು ಕೈಗೊಳ್ಳುತ್ತೇನೆ.
130 ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ,
ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.

131

ನಾನು ಬಾಯಾರಿ ನಿನ್ನನ್ನೇ ಎದುರುನೋಡುತ್ತಿದ್ದೇನೆ,

ನಿನ್ನ ಆಜ್ಞೆಗಳನ್ನು ಲವಲವಿಕೆಯಿಂದ ಬಯಸಿದ್ದೇನೆ.
132 ನನಗೆ ಅಭಿಮುಖನಾಗಿ ಕರುಣಿಸು,
ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವುದು ನಿನ್ನ ನಿಯಮವಲ್ಲವೇ?

133

ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು,

ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು.
134 ನರ ಮನುಷ್ಯರ ಬಲಾತ್ಕಾರದಿಂದ ನನ್ನನ್ನು ಬಿಡಿಸು,
ಆಗ ನಿನ್ನ ನಿಯಮಗಳನ್ನು ಕೈಗೊಳ್ಳುವೆನು.

135

ನಿನ್ನ ದಾಸನ ಮೇಲೆ ನಿನ್ನ ಮುಖಪ್ರಸನ್ನತೆಯಿರಲಿ,

ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.
ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿಮಿತ್ತ,
ನನ್ನ ಕಣ್ಣಿರು ಪ್ರವಾಹವಾಗಿ ಹರಿಯುತ್ತದೆ.

ಸಾದ್ದಿ.

136

ಯೆಹೋವನ ನ್ಯಾಯ ವಿಧಿಗಳು


137

ಯೆಹೋವನೇ, ನೀನು ನೀತಿಸ್ವರೂಪನು,

ನಿನ್ನ ವಿಧಿಗಳು ನ್ಯಾಯವಾಗಿವೆ.
138 ನೀತಿ, ಸತ್ಯತೆಗಳಿಂದಲೇ ನಿನ್ನ ಕಟ್ಟಳೆಗಳನ್ನು ಸ್ಥಾಪಿಸಿದ್ದಿ,

139

ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದರಿಂದ

ನಿನ್ನ ಮೇಲಿನ ಅಭಿಮಾನ ನನ್ನನ್ನು ದಹಿಸಿಬಿಟ್ಟಿತು,
140 ನಿನ್ನ ನುಡಿಯು ಪರಿಶುದ್ಧವಾದದ್ದು,
ನಿನ್ನ ಸೇವಕನು ಅದನ್ನೇ ಪ್ರೀತಿಸುತ್ತಾನೆ.

141

ನಾನು ಅಲ್ಪನೂ, ತಿರಸ್ಕಾರ ಹೊಂದಿದವನೂ ಆಗಿದ್ದೇನೆ,

ಆದರೂ ನಿನ್ನ ನಿಯಮಗಳನ್ನು ಮರೆಯುವುದಿಲ್ಲ.
142 ನಿನ್ನ ನೀತಿಯು ನಿತ್ಯವಾಗಿದೆ,
ನಿನ್ನ ಧರ್ಮಶಾಸ್ತ್ರವು ಸತ್ಯವಾಗಿದೆ.

143

ಕಷ್ಟ, ಸಂಕಟಗಳು ನನ್ನನ್ನು ಮುತ್ತಿಕೊಂಡಿವೆ,

ಆದರೂ ನಿನ್ನ ಆಜ್ಞೆಗಳು ನನಗೆ ಸಂತೋಷಕರವಾಗಿವೆ.
ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು,
ನನಗೆ ವಿವೇಕವನ್ನು ದಯಪಾಲಿಸು, ಆಗ ಬದುಕುವೆನು.

ಖೋಫ್.

144

ಯೆಹೋವನಿಗೆ ಮೊರೆಯಿಡುವುದು


145

ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ,

ಸದುತ್ತರವನ್ನು ದಯಪಾಲಿಸು,
ನಿನ್ನ ನಿಬಂಧನೆಗಳನ್ನು ಅನುಸರಿಸುವೆನು.
146 ನಿನಗೇ ಮೊರೆಯಿಟ್ಟಿದ್ದೇನೆ ರಕ್ಷಿಸು.
ನಿನ್ನ ಕಟ್ಟಳೆಗಳನ್ನು ಕೈಗೊಳ್ಳುವೆನು.

147

ಅರುಣೋದಯದಲ್ಲಿ ಎದ್ದು ಮೊರೆಯಿಟ್ಟೆನು,

ನಿನ್ನ ವಾಕ್ಯವನ್ನು ನಿರೀಕ್ಷಿಸಿಕೊಂಡಿದ್ದೇನೆ.
148 ನಿನ್ನ ನುಡಿಯನ್ನು ಧ್ಯಾನಿಸಲು,
ನನ್ನ ಕಣ್ಣುಗಳು ಇರುಳಿನ ಒಂದೊಂದು ಜಾವದಲ್ಲೂ ತೆರೆದಿರುತ್ತವೆ.

149

ಯೆಹೋವನೇ, ನಿನ್ನ ಕೃಪೆಗೆ ತಕ್ಕಂತೆ ನನ್ನ ಮೊರೆಯನ್ನು ಕೇಳು,

ನಿನ್ನ ವಿಧಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
150 ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು,
ನನ್ನ ಸಮೀಪಕ್ಕೆ ಬಂದಿದ್ದಾರೆ.

151

ಯೆಹೋವನೇ, ನೀನು ನನ್ನ ಹತ್ತಿರವೇ ಇರುವೆ,

ನಿನ್ನ ಆಜ್ಞೆಗಳೆಲ್ಲಾ ಯಥಾರ್ಥವಾಗಿವೆ.
ನೀನು ನಿನ್ನ ಕಟ್ಟಳೆಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಿ ಎಂದು,
ನಾನು ಮೊದಲಿನಿಂದಲೇ ಅವುಗಳ ಮೂಲಕ ತಿಳಿದುಕೊಂಡಿದ್ದೇನೆ.

ರೇಷ್.

152

ಸಂರಕ್ಷಣೆಗಾಗಿ ವಿಜ್ಞಾಪನೆ


153

ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು,

ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ.
154 ನನ್ನ ವ್ಯಾಜ್ಯವನ್ನು ನಡೆಸಿ ನನ್ನನ್ನು ಬಿಡಿಸು,
ನಿನ್ನ ನುಡಿಗನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.

155

ನಿನ್ನ ನಿಬಂಧನೆಗಳನ್ನು ಅಲಕ್ಷ್ಯಮಾಡುವ ದುಷ್ಟರಿಗೆ ರಕ್ಷಣೆಯೇ ಇಲ್ಲ.

156 ಯೆಹೋವನೇ, ನಿನ್ನ ಕೃಪಾಕಾರ್ಯಗಳು ಬಹಳವಾಗಿವೆ,
ನಿನ್ನ ವಿಧಿಗಳಿಗೆ ತಕ್ಕಂತೆ ನನ್ನನ್ನು ಚೈತನ್ಯಗೊಳಿಸು.

157

ನನ್ನನ್ನು ಹಿಂಸಿಸುವ ವೈರಿಗಳು ಅನೇಕರಿದ್ದರೂ,

ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ನಡೆಯಲಿಲ್ಲ.
158 ನಿನ್ನ ನುಡಿಯನ್ನು ಕೈಗೊಳ್ಳದ
ಧರ್ಮಭ್ರಷ್ಟರನ್ನು ನೋಡಿ ಅಸಹ್ಯಪಟ್ಟಿದ್ದೇನೆ.

159

ಯೆಹೋವನೇ, ನೋಡು,

ನಿನ್ನ ನಿಯಮಗಳು ನನಗೆ ಎಷ್ಟೋ ಪ್ರಿಯವಾಗಿವೆ,
ನಿನ್ನ ಕೃಪಾನುಸಾರವಾಗಿ ನನ್ನನ್ನು ಚೈತನ್ಯಗೊಳಿಸು.
ನಿನ್ನ ವಾಕ್ಯದ ಸಾರಾಂಶವು ಸತ್ಯವೇ,
ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಾಂತರಕ್ಕೂ ಇರುವವು.

ಷಿನ್.

160

ಎಷ್ಟೋ ಪ್ರಿಯವಾದ ನೀತಿವಿಧಿಗಳು


161

ಪ್ರಭುಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ,

ನನ್ನ ಹೃದಯವು ನಿನ್ನ ವಾಕ್ಯಕ್ಕೆ ಮಾತ್ರ ಭಯಪಡುತ್ತದೆ.
162 ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ,
ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ.

163

ಮಿಥ್ಯವಾದದ್ದನ್ನು ದ್ವೇಷಿಸುತ್ತೇನೆ,

ಅದು ನನಗೆ ಅಸಹ್ಯವಾಗಿದೆ,
ನಿನ್ನ ಧರ್ಮಶಾಸ್ತ್ರವು ನನಗೆ ಪ್ರಿಯವಾಗಿದೆ.
164 ನಿನ್ನ ನೀತಿವಿಧಿಗಳಿಗೋಸ್ಕರ,
ನಿನ್ನನ್ನು ದಿನಕ್ಕೆ ಏಳು ಸಾರಿ ಕೊಂಡಾಡುತ್ತೇನೆ.

165

ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ,

ಸಂಪೂರ್ಣ ಸಮಾಧಾನವಿರುತ್ತದೆ,
ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ.
166 ಯೆಹೋವನೇ, ಯಾವಾಗ ರಕ್ಷಿಸುವಿಯೋ ಎಂದು,
ನಿರೀಕ್ಷಿಸುತ್ತಾ ಇದ್ದೇನೆ,
ನಿನ್ನ ಆಜ್ಞೆಗಳನ್ನು ಕೈಗೊಂಡಿದ್ದೇನೆ.

167

ನಿನ್ನ ಕಟ್ಟಳೆಗಳನ್ನು ಮನಃಪೂರ್ವಕವಾಗಿ ಅನುಸರಿಸಿದ್ದೇನೆ,

ಅವು ನನಗೆ ಬಹುಪ್ರಿಯವಾಗಿವೆ.
ನಿನ್ನ ನಿಯಮಗಳನ್ನೂ, ಕಟ್ಟಳೆಗಳನ್ನೂ ಅನುಸರಿಸಿದ್ದೇನೆ,
ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.

ತಾವ್.

168

ಯೆಹೋವನ ಸಹಾಯಕ್ಕಾಗಿ ಬೇಡಿಕೊಳ್ಳುವುದು


169

ಯೆಹೋವನೇ, ನನ್ನ ಕೂಗು ನಿನ್ನ ಸನ್ನಿಧಿಯನ್ನು ಮುಟ್ಟಲಿ,

ನಿನ್ನ ವಾಕ್ಯಾನುಸಾರವಾಗಿ ನನಗೆ ಜ್ಞಾನವನ್ನು ದಯಪಾಲಿಸು.
170 ನನ್ನ ವಿಜ್ಞಾಪನೆಯು ನಿನ್ನ ಸನ್ನಿಧಿಗೆ ಸೇರಲಿ,
ನಿನ್ನ ನುಡಿಗೆ ತಕ್ಕಂತೆ ನನ್ನನ್ನು ರಕ್ಷಿಸು.

171

ನಿನ್ನ ನಿಬಂಧನೆಗಳನ್ನು ನನಗೆ ಕಲಿಸಿದ್ದಿಯಲ್ಲಾ.

ನನ್ನ ತುಟಿಗಳಿಂದ ಸದಾ ನಿನ್ನ ಸ್ತುತಿ ಹೊರಡಲಿ,
172 ನನ್ನ ನಾಲಿಗೆಯು ನಿನ್ನ ನುಡಿಗಳನ್ನು ವರ್ಣಿಸಲಿ,
ನಿನ್ನ ಆಜ್ಞೆಗಳೆಲ್ಲಾ ನೀತಿಯುಳ್ಳದ್ದು.

173

ನಿನ್ನ ನಿಯಮಗಳನ್ನು ಆರಿಸಿಕೊಂಡಿದ್ದೇನೆ,

ನಿನ್ನ ಕೈ ನನಗೆ ನೆರವಾಗಲಿ.
174 ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯನ್ನು ಕೋರುತ್ತೇನೆ,
ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವು.

175

ನನ್ನ ಪ್ರಾಣವನ್ನು ಉಳಿಸು,

ಅದು ನಿನ್ನನ್ನು ಕೊಂಡಾಡಲಿ.
ನಿನ್ನ ನಿಯಮಗಳಿಂದ ನನಗೆ ಸಹಾಯವಾಗಲಿ.
176 ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ,
ನಿನ್ನ ಸೇವಕನನ್ನು ಪರಾಂಬರಿಸು.
ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ.

Copyright information for KanULB