Psalms 122

ಯಾತ್ರಿಕರು ಯೆರೂಸಲೇಮನ್ನು ಸ್ಮರಿಸುವುದು

ಯಾತ್ರಾಗೀತೆ; ದಾವೀದನ ಕೀರ್ತನೆ.

1<<ಯೆಹೋವನ ಮಂದಿರಕ್ಕೆ ಹೋಗೋಣ ಬಾ!>>
ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.
2 ಯೆರೂಸಲೇಮೇ! ನಮ್ಮ ಕಾಲುಗಳು,
ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ.
3 ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ,
ಕಟ್ಟಲ್ಪಟ್ಟ ನಗರವಾಗಿದ್ದಿ.

4

ಕುಲಗಳು ಅಂದರೆ ಯೆಹೋವನ ಕುಲದವರು,

ಯೆಹೋವನ ನಾಮದ ಕೀರ್ತನೆಗೋಸ್ಕರ,
ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು.
ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ.
5 ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ,
ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.

6

ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ.

<<ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.
7 ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ;
ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.>>

8

ನನ್ನ ಬಂಧುಮಿತ್ರರ ನಿಮಿತ್ತವಾಗಿ,

<<ನಿನಗೆ ಸಮಾಧಾನವಾಗಲಿ>> ಎಂದು ಹೇಳುತ್ತೇನೆ.
9 ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ,
ನಿನಗೆ ಸುಕ್ಷೇಮವನ್ನು ಹಾರೈಸುತ್ತೇನೆ.

Copyright information for KanULB