Psalms 123

ಬಾಧಿಸಲ್ಪಟ್ಟವನ ನಿರೀಕ್ಷೆ

ಯಾತ್ರಾಗೀತೆ.

(ನೆಹೆ. 4:1-6)

1ಪರಲೋಕದಲ್ಲಿ ಆಸೀನನಾಗಿರುವಾತನೇ,
ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.
2 ಯಜಮಾನನ ಕೈಯನ್ನು ದಾಸನ ಕಣ್ಣುಗಳು,
ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ,
ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ,
ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.

3

ಯೆಹೋವನೇ, ನಮ್ಮನ್ನು ಕಟಾಕ್ಷಿಸು, ಕಟಾಕ್ಷಿಸು.

ಅವಮಾನ ಹೊಂದಿ ಹೊಂದಿ ನಮಗೆ ಸಾಕಾಯಿತು;
4 ಲೋಕಭೋಗಿಗಳ ಹಾಸ್ಯದಿಂದಲೂ,
ಗರ್ವಿಷ್ಠರ ನಿಂದೆಯಿಂದಲೂ ನಮ್ಮ ಮನಸ್ಸು ಬೇಸತ್ತು ಹೋಯಿತು.

Copyright information for KanULB