Psalms 124

ಯೆಹೋವನೊಬ್ಬನೇ ರಕ್ಷಕನು

ಯಾತ್ರಾಗೀತೆ; ದಾವೀದನದು.

(ಕೀರ್ತ. 129; ನೆಹೆ. 4:7-23)

1<<ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?>>,
ಎಂದು ಇಸ್ರಾಯೇಲರೇ ಹೇಳಲಿ.
2 ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ,
ಯೆಹೋವನು ನಮಗಿಲ್ಲದಿದ್ದರೆ,
3 <<ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು,
ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;

4

ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು;

ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು;
5 ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.>>

6

ಯೆಹೋವನಿಗೆ ಕೊಂಡಾಟವಾಗಲಿ;

ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ.
7 ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ;
ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.

8

ಭೂಮಿ, ಆಕಾಶಗಳನ್ನು ಉಂಟುಮಾಡಿದ,

ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.

Copyright information for KanULB