Psalms 126

ಚೀಯೋನಿನ ಸೌಭಾಗ್ಯದ ಪುನಃಸ್ಥಾಪನೆಗಾಗಿ ಪ್ರಾರ್ಥನೆ

ಯಾತ್ರಾಗೀತೆ.

(ಕೀರ್ತ. 85)

1ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ,
ನಾವು ಕನಸು ಕಂಡವರಂತೆ ಇದ್ದೆವು.

2

ಆಗ ನಮ್ಮ ಬಾಯಿ ಬಲು ನಗೆಯಿಂದಲೂ,

ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು.
ಅನ್ಯಜನರು, <<ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ>> ಎಂದು
ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
3 ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ;
ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ.

4

ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ,

ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು.
5 ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು,
6 ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು,
ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.

Copyright information for KanULB