Psalms 13

ಶತ್ರುಪೀಡಿತನ ಪ್ರಾರ್ಥನೆ

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ರಚಿಸಿದ ಕೀರ್ತನೆ.

1ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ?
ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ?
2 ನಾನು ಇನ್ನೆಷ್ಟರವರೆಗೆ ಹಗಲೆಲ್ಲಾ ದುಃಖಾಕ್ರಾಂತನಾಗಿದ್ದು,
ಆಲೋಚಿಸಿಕೊಳ್ಳುತ್ತಾ ಇರಬೇಕು?
ಇನ್ನೆಲ್ಲಿಯ ತನಕ ವಿರೋಧಿಯು ನನಗೆ ದೊರೆಯಾಗಿರಬೇಕು?

3

ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ನನಗೆ ಸದುತ್ತರವನ್ನು ದಯಪಾಲಿಸು;

ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು.
4 ನನ್ನ ಶತ್ರುವು, <<ನಾನು ಅವನನ್ನು ಜಯಿಸಿದೆನು>> ಎಂದು ಹೇಳಿಕೊಳ್ಳಬಾರದು;
ವೈರಿಗಳು, <<ನನ್ನ ಎದುರಾಳಿಯು ಜಾರಿಬಿದ್ದನು>> ಎಂದು ಹಿಗ್ಗಬಾರದು.

5

ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ;

ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು.
6 ಯೆಹೋವನ ಮಹೋಪಕಾರಕ್ಕಾಗಿ ಆತನಿಗೆ ಹಾಡುವೆನು.

Copyright information for KanULB