Psalms 146

ಯೆಹೋವನನ್ನು ಆಶ್ರಯಿಸಿಕೊಂಡವನು ಧನ್ಯನು

1ಯೆಹೋವನಿಗೆ ಸ್ತೋತ್ರ!
ನನ್ನ ಮನವೇ, ಯೆಹೋವನನ್ನು ಸ್ತುತಿಸು.
2 ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು,
ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.

3

ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ,

ಅವರು ಸಹಾಯ ಮಾಡ ಶಕ್ತರಲ್ಲ,
4 ಉಸಿರು ಹೋಗಲು ಅವರು ಮಣ್ಣಿಗೆ ಸೇರುತ್ತಾರೆ,
ಅವರ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವುದು.

5

ಯಾರಿಗೆ ಯಾಕೋಬನ ದೇವರು ಸಹಾಯಕನೋ,

ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ,
ಅವನೇ ಧನ್ಯನು.
6 ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ,
ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ,

7

ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ,

ಹಸಿದವರಿಗೆ ಆಹಾರ ಕೊಡುವವನೂ ಆತನೇ.
ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.
8 ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ.
ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ.
ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ.

9

ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ.

ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ.
ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ.
10 ಯೆಹೋವನು ಸದಾಕಾಲವೂ ಅರಸನಾಗಿರುವನು,
ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು,
ಯೆಹೋವನಿಗೆ ಸ್ತೋತ್ರ!

Copyright information for KanULB