Psalms 150

ಸಮಾಪ್ತಿಯ ಕೀರ್ತನೆ

1ಯೆಹೋವನಿಗೆ ಸ್ತೋತ್ರ!
ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ;
ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ.
2 ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ;
ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ.

3

ಕೊಂಬೂದುತ್ತಾ ಆತನನ್ನು ಸ್ತುತಿಸಿರಿ;

ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.
4 ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ;
ತಂತೀವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.
5 ತಾಳದಿಂದ ಆತನನ್ನು ಸ್ತುತಿಸಿರಿ;
ಝಲ್ಲರಿಯಿಂದ ಆತನನ್ನು ಸ್ತುತಿಸಿರಿ.

6

ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ;

ಯೆಹೋವನಿಗೆ ಸ್ತೋತ್ರ!
Copyright information for KanULB