Psalms 16

ಯೆಹೋವನ ಸೇವೆಯು ಪೂರ್ಣಾನಂದಕರವಾದದ್ದು

ದಾವೀದನ ಕಾವ್ಯ.

1ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು.
2 ನಾನು ಯೆಹೋವನನ್ನು ಕುರಿತು, <<ನೀನೇ ನನ್ನ ಒಡೆಯನು;
ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ>> ಎಂದು ಹೇಳುವೆನು.
3 ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ,
<<ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು>> ಎಂದು ಹೇಳುವೆನು.

4

ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು.

ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ;
ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.

5

ನನ್ನ ಪಾಲೂ, ನನ್ನ ಪಾನವೂ ಯೆಹೋವನೇ,

ನೀನೇ ನನ್ನ ಸ್ವಾಸ್ತ್ಯವನ್ನು ಭದ್ರಗೊಳಿಸುತ್ತೀ.
6 ನನಗೆ ಪ್ರಾಪ್ತವಾಗಿರುವ ಸ್ವಾಸ್ತ್ಯವು ರಮಣೀಯವಾದದ್ದು;
ಅದು ನನಗೆ ಸಂತೃಪ್ತಿಕರವಾಗಿದೆ.

7

ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ;

ನಾನು ಆತನನ್ನು ಕೊಂಡಾಡುವೆನು.
ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ.
8 ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ;
ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.

9

ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ;

ನನ್ನ ಮನವು ಉಲ್ಲಾಸಗೊಳ್ಳುತ್ತದೆ;
ನನ್ನ ಶರೀರವೂ ಸುರಕ್ಷಿತವಾಗಿರುವುದು.
10 ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ;
ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.

11

ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ;

ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ;
ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.

Copyright information for KanULB