Psalms 32

ಪಾಪಪರಿಹಾರ ಮತ್ತು ನಂಬಿಕೆಯಿಂದ ಉಂಟಾಗುವ ಭಾಗ್ಯ

ದಾವೀದನ ಪದ್ಯ.

1ಯಾರ ದ್ರೋಹವು ಪರಿಹಾರವಾಗಿದೆಯೋ,
ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.
2 ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ?
ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು.

3

ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ,

ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.
4 ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು;
ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು.
ಸೆಲಾ


5

ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು

ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು.
ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ.
ಸೆಲಾ

6 ಆದುದರಿಂದ ಭಕ್ತರೆಲ್ಲರು ಕಷ್ಟಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ;
ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ.

7

ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ;

ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ.
ಸೆಲಾ

8 ಯೆಹೋವನು, <<ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು;
ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು>> ಎಂದು ಅನ್ನುತ್ತಾನಲ್ಲಾ.

9

ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ

ಹೇಸರಕತ್ತೆಯಂತಾಗಲಿ ಇರಬೇಡಿರಿ;
ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ.
10 ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು;
ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು.

11

ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರ್ರಿ;

ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ.

Copyright information for KanULB