Psalms 52

ದುಷ್ಟಾಧಿಕಾರಿಯ ದುಸ್ವಭಾವದ ಖಂಡನೆ

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಅಹೀಮೆಲೆಕನ ಮನೆಗೆ ಬಂದ ವರ್ತಮಾನವನ್ನು ಎದೋಮ್ಯನಾದ ದೋಯೇಗನು ಸೌಲನಿಗೆ ತಿಳಿಸಿದಾಗ ದಾವೀದನು ರಚಿಸಿದ ಪದ್ಯ.

1ದುಷ್ಟಾಧಿಕಾರಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು?
ದೇವರ ಕೃಪೆಯು ಯಾವಾಗಲೂ ಇರುವುದು.
2 ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ
ಅಪಾಯಗಳನ್ನೇ ಕಲ್ಪಿಸುತ್ತದೆ.

3

ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ;

ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ.
ಸೆಲಾ


4

ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ.

5 ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು;
ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು;
ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.

6

ನೀತಿವಂತರು ಅದನ್ನು ನೋಡಿ ಭಯಪಡುವರು;

ಅವರು ಪರಿಹಾಸ್ಯಮಾಡುತ್ತಾ,
7 <<ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು,
ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ>> ಎಂದು ಹೇಳುವರು.

8

ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು;

ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.
9 ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು;
ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು.

Copyright information for KanULB