Psalms 87

ಚೀಯೋನೇ ಎಲ್ಲಾ ದೇವಜನರ ಮಾತೃಭೂಮಿ

ಕೋರಹೀಯರ ಕೀರ್ತನೆ; ಗೀತ.

(ಯೆಶಾ. 2:2-4; 19:19-24)

1ಯೆಹೋವನು ಸ್ಥಾಪಿಸಿದ ಪಟ್ಟಣವು
ಪರಿಶುದ್ಧ ಪರ್ವತದ ಮೇಲಿದೆ.
2 ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ,
ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.
3 ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ,

4

<<ಐಗುಪ್ತ, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು.

ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು>> ಎಂಬುದೇ.

5

ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು;

ಅದನ್ನು ಪರಾತ್ಪರನು ತಾನೇ ಸ್ಥಿರಪಡಿಸುವನು.
6 ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ,
<<ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು>> ಎಂದು ಬರೆಯುವನು.
ಸೆಲಾ


7

ಇವರು ಹಾಡುತ್ತಾ, ಕುಣಿಯುತ್ತಾ,

<<ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ>> ಎಂದು ಹೇಳುವರು.

Copyright information for KanULB