Psalms 95

ದೇವರನ್ನು ವಿಶ್ವಾಸದಿಂದ ಆರಾಧಿಸುವುದು

(ಕೀರ್ತ. 81; 96—100)

1ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ;
ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.
2 ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ;
ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.
3 ಯೆಹೋವನು ಮಹಾದೇವರೂ,
ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.

4

ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ;

ಪರ್ವತಶಿಖರಗಳು ಆತನವೇ.
5 ಆತನೇ ಸಮುದ್ರವನ್ನು ನಿರ್ಮಿಸಿದವನು;
ಅದು ಆತನದೇ, ಒಣನೆಲವು ಆತನ ಕೈಕೆಲಸವೇ.

6

ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ

ಸಾಷ್ಟಾಂಗವೆರಗಿ ಆರಾಧಿಸೋಣ.
7 ಆತನು ನಮ್ಮ ದೇವರು;
ನಾವೋ ಆತನು ಪಾಲಿಸುವ ಪ್ರಜೆಯೂ,
ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ.
ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.

8

ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ,

ಮಸ್ಸಾದಲ್ಲಿ ಮಾಡಿದ ದಿನದಂತೆ,
ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.
9 ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು;
ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು.

10

ನಾನು ನಲ್ವತ್ತು ವರುಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು;

<<ಈ ಜನರು ಹೃದಯದಲ್ಲಿ ತಪ್ಪಿಹೋಗುವವರು,
ನನ್ನ ಮಾರ್ಗವನ್ನು ತಿಳಿಯದವರು>> ಎಂದು ಹೇಳಿದೆನು.
11 ಆದುದರಿಂದ ಇವರು, <<ನನ್ನ ವಿಶ್ರಾಂತಿಯಲ್ಲಿ ಸೇರಬಾರದು>> ಎಂದು
ಕೋಪಗೊಂಡು ಪ್ರಮಾಣಮಾಡಿದೆನು.

Copyright information for KanULB