Revelation of John 10

ಬಲಿಷ್ಠನಾದ ದೂತನು ಮತ್ತು ಚಿಕ್ಕ ಸುರುಳಿಯು

1ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು.
10:1 ಯೆಹೆ. 1:28:
ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು.
10:1 ಪ್ರಕ. 1:16; ಮತ್ತಾ 17:2:
ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು.
10:2 ಪ್ರಕ. 1:15:
ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು.
2
10:2 ಪ್ರಕ. 10:8-10:
ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು. ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು,

3
10:3 ಯೋವೇ. 3:16; ಆಮೋ. 1:2:
ಸಿಂಹವು ಘರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು.
4ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, <<ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ
10:4 ಮೂಲ:ಅವುಗಳಿಗೆ ಮುದ್ರೆಹಾಕು; ದಾನಿ. 8:26; 12:4, 9; ಪ್ರಕ. 22:10:
ಗುಪ್ತವಾಗಿಡು>> ಎಂದು ಹೇಳುವ ದೈವವಾಣಿಯನ್ನು ಕೇಳಿದೆನು.

5ಅನಂತರ ಸಮುದ್ರದ ಮೇಲೆಯೂ, ಭೂಮಿಯ ಮೇಲೆಯೂ ನಿಂತಿರುವವನಾಗಿ ನನಗೆ ಕಾಣಿಸಿದ ದೇವದೂತನು
10:5 ಆದಿ. 14:22:
ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ,
6
10:6 ಪ್ರಕ. 4:11:
ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ,
10:7 ಪ್ರಕ. 4:9:
ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ
10:7 ದಾನಿ. 12:7:
ಆಣೆಯಿಟ್ಟು,
10:7 ಪ್ರಕ. 12:12; 16:17; 21:6; ದಾನಿ. 12:7:
<<ಇನ್ನು ತಡಮಾಡದೆ,
7
10:7 ಪ್ರಕ. 11:15:
ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತ್ತೂರಿಯನ್ನು ಊದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು
10:7 ಆಮೋ. 3:7:
ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು>> ಎಂದು ಹೇಳಿದನು.

8ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, <<ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೊ>> ಎಂದು ಹೇಳಿತು.

9ನಾನು ಆ ದೂತನ ಬಳಿಗೆ ಹೋಗಿ, <<ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ,
10:9 ಯೆಹೆ. 2:4, 3:3; ಯೆರೆ. 15:16:
ನೀನು ಅದನ್ನು ತೆಗೆದುಕೊಂಡು ತಿಂದು ಬಿಡು, ಅದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವುದು, ಆದರೆ ನಿನ್ನ ಬಾಯಿ ಜೇನಿನಂತೆ ಸಿಹಿಯಾಗಿರುವುದು>> ಎಂದು ಹೇಳಿದನು.

10ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು. ಅನಂತರ ಆ ದೂತನು ನನಗೆ, <<ನೀನು ಇನ್ನೂ ಅನೇಕರನ್ನು, ಭಾಷೆಗಳನ್ನೂ, ಅರಸರನ್ನೂ ಕುರಿತು ಪ್ರವಾದನೆ ಹೇಳಬೇಕು>> ಎಂದು ಆಜ್ಞಾಪಿಸಿದನು.

11

Copyright information for KanULB