Revelation of John 21

ನೂತನ ಭೂಮ್ಯಾಕಾಶಗಳು

1ತರುವಾಯ
21:1 ಯೆಶಾ. 65:17; 66:22; 2 ಪೇತ್ರ. 3:13:
ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು.
21:1 ಪ್ರಕ. 20:11:
ಮೊದಲಿನ ಆಕಾಶವೂ ಮೊದಲಿನ ಭೂಮಿಯೂ
21:1 ಅಥವಾ:ಕಳೆದು, ಮಾಯವಾಗು, ಇಲ್ಲದೆ.
ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ.
2ಇದಲ್ಲದೆ ಪರಲೋಕದಿಂದ
21:2 ಯೆಶಾ. 52:1; ಪ್ರಕ. 11:2; 22:19:
ಪರಿಶುದ್ಧ ಪಟ್ಟಣವಾದ
21:2 ಗಲಾ. 4:26; ಇಬ್ರಿ. 12:22; ಪ್ರಕ. 3:12:
ಹೊಸ ಯೆರೂಸಲೇಮ್
21:2 ಇಬ್ರಿ. 11:10
ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು.
21:2 ಯೆಶಾ. 61:10; 62:4, 5; ಪ್ರಕ. 19:7:
ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.

3ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, <<ಇಗೋ
21:3 ಯಾಜ. 26:11, 12:
ದೇವರ ನಿವಾಸವು ಮನುಷ್ಯರೊಂದಿಗೆ ಇದೆ.
21:3 ಯೋಹಾ. 1:14:
ಆತನು ಅವರೊಡನೆ ವಾಸಮಾಡುವನು.
21:3 ಯೆಹೆ. 36:27:
ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.
4
21:4 ಯೆಶಾ. 25:8; ಪ್ರಕ. 7:17:
ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು.
21:4 1 ಕೊರಿ. 15:26; ಪ್ರಕ. 20:14:
ಇನ್ನು ಮರಣವಿರುವುದಿಲ್ಲ.
21:4 ಯೆಶಾ. 35:10; 51:11; 65:19:
ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು>> ಎಂದು ಹೇಳಿತು.

5ಆಗ
21:5 ಪ್ರಕ. 4:2, 9; 5:1; 20:11:
ಸಿಂಹಾಸನದ ಮೇಲೆ ಕುಳಿತಿದ್ದಾತನು,
21:5 2 ಕೊರಿ. 15:26; ಪ್ರಕ. 20:14:
<<ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ>> ಎಂದನು. ಮತ್ತು
21:5 ಅಥವಾ, ಆತನು
ಒಬ್ಬನು ನನಗೆ, <<ನೀನು ಇದನ್ನು ಬರೆ. ಏಕೆಂದರೆ ಈ
21:5 1 ತಿಮೊ. 1:15; ಪ್ರಕ. 3:14; 19:11; 22:6:
ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ>> ಎಂದು ಹೇಳಿದನು.
6ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು,
21:6 ಪ್ರಕ. 10:6:
<<ಎಲ್ಲಾ ನೆರವೇರಿತು,
21:6 ಪ್ರಕ. 1:8; 22:13:
ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.
21:6 ಯೆಶಾ. 55:1; ಯೋಹಾ 4:10, 13, 14; 7:37; ಪ್ರಕ. 22:17:
ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.

7
21:7 ಪ್ರಕ. 2:7:
ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು.
21:7 ವ. 3:
ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.
8
21:8 1 ಕೊರಿ. 6:9, 10; ಗಲಾ. 5:19-21; ಎಫೆ. 5:5; 1 ತಿಮೊ. 1:9:
ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು
21:8 ಪ್ರಕ. 19:20:
ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು>> ಎಂದು ನನಗೆ ಹೇಳಿದನು.

ಹೊಸ ಯೆರೂಸಲೇಮ್

9
21:9 ಪ್ರಕ. 15:1:
ಕಡೇ ಏಳು ಉಪದ್ರವಗಳಿಂದ ತುಂಬಿದ
21:9 ಪ್ರಕ. 17:1:
ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, <<ಬಾ ಕುರಿಮರಿಯಾದಾತನಿಗೆ
21:9 ವ. 2:
ಹೆಂಡತಿಯಾಗಲಿರುವ ವಧುವನ್ನು ನಿನಗೆ ತೋರಿಸುವೆನು>> ಎಂದು ಹೇಳಿ,
10
21:10 ಪ್ರಕ. 17:3; ಯೆಹೆ. 43:5:
ದೇವರಾತ್ಮನಲ್ಲಿ ನನ್ನನ್ನು
21:10 ಕೀರ್ತ. 87:1; ಯೆಹೆ. 40. 2:
ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು.

11ಅದು ದೇವರ ತೇಜಸ್ಸಿನಿಂದ ಕೂಡಿತ್ತು.
21:11 ಮತ್ತಾ 5:14; ಫಿಲಿ. 2:15
ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.
12ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು.
21:12 ಯೆಹೆ. 8:31-34:
ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು.
13ಪೂರ್ವ ದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು.

14
21:14 ಇಬ್ರಿ. 11:10; 1 ಕೊರಿ. 3:11:
ಪಟ್ಟಣದ
21:14 ಅಥವಾ, ಗೋಡೆಗೆ.
ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು.
21:14 ಮತ್ತಾ 16:18; ಎಫೆ. 2:20:
ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
15ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ
21:15 ಯೆಹೆ. 40 3, 5; ಪ್ರಕ. 11:1:
ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.

16ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು
21:16 ಮೂಲ:ಹನ್ನೆರಡು ಸಾವಿರ ಸ್ತಾದ್ಯ. ಅಂದರೆ ಸುಮಾರು ಹದಿನೈದು ಮೈಲಿಗಳು.
2200 ಕಿಲೊಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು.
17ಅವನು ಅದರ ಗೋಡೆಯನ್ನು ಅಳತೆ ಮಾಡಿದನು. ಅದು ನೂರನಾಲ್ವತ್ತು ನಾಲ್ಕು
21:17 ಅಂದರೆ ಮನುಷ್ಯನ ಕೈಯಳತ್ತೆ.
ಮೊಳವಾಗಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಎಂದರೆ ದೇವದೂತನ ಮೊಳ.

18ಆ ಗೋಡೆಯು
21:18 ಅಥವಾ:ಚಕಮಕಿ ಜಾತಿಕಲ್ಲು, ವಜ್ರದಿಂದ; ವ. 11:
ಸೂರ್ಯಕಾಂತ ಶಿಲೆಯಿಂದ ಕಟ್ಟಲ್ಪಟ್ಟಿತ್ತು ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.
19ಪಟ್ಟಣದ ಗೋಡೆಯ ಅಸ್ತಿವಾರಗಳು
21:19 ಯೆಶಾ. 54:11, 12
ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತಶಿಲೆ ಎರಡನೆಯದು ನೀಲಮಣಿ ಮೂರನೆಯದು ಪಚ್ಚೆ. ನಾಲ್ಕನೇಯದು ಪದ್ಮರಾಗ,
20ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲಸ್ಫಟಿಕ,

21ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಶುದ್ಧವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು. 22
21:22 ಯೋಹಾ 4:23:
ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ. ಏಕೆಂದರೆ ಸರ್ವಶಕ್ತನಾಗಿರುವ ದೇವರಾದ ಕರ್ತನೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ.

23
21:23 ಯೆಶಾ. 60. 19, 20; ಪ್ರಕ. 22:5; ವ. 25:
ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ
21:23 ವ. 11:
ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.
24
21:24 ಯೆಶಾ. 60. 3; ಪ್ರಕ. 22:2:
ಅದರ ಬೆಳಕಿನಿಂದ ಜನಾಂಗಗಳವರು ನಡೆದಾಡುವರು.
21:24 ವ. 26; ಯೆಶಾ. 60. 5, 16:
ಭೂರಾಜರು ತಮ್ಮ ವೈಭವವನ್ನು ಅದರೊಳಗೆ ತರುವರು.
25
21:25 ಯೆಶಾ. 60. 11:
ಅದರ ಹೆಬ್ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವುದೇ ಇಲ್ಲ. ಅಲ್ಲಿ
21:26 ವ. 23:
ರಾತ್ರಿಯಂತೂ ಇಲ್ಲವೇ ಇಲ್ಲ.

26ಜನಾಂಗಗಳ ವೈಭವವೂ ಗೌರವವೂ ಅಲ್ಲಿಗೆ ತರಲ್ಪಡುವವು.
21:27 ಯೆಶಾ. 35:8; 52:1; ಯೆಹೆ. 44:9; ಯೋವೇ. 3:17; ಜೆಕ. 14:21; ಪ್ರಕ. 22:14, 15:
ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ
21:27 ಪ್ರಕ. 3:5:
ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.

27

Copyright information for KanULB