Revelation of John 8

ಏಳನೆಯ ಮುದ್ರೆ

1
8:1 ಯಜ್ಞದ ಕುರಿಮರಿ ಅಥವಾ ಯೇಸುಕ್ರಿಸ್ತನು.
ಆತನು
8:1 ಪ್ರಕ. 5:1; 6:1:
ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೆ ಕಾಲ ಪರಲೋಕದಲ್ಲಿ ನಿಶ್ಯಬ್ದವಾಯಿತು.
2ಆಗ
8:2 ಲೂಕ. 1:19:
ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು.

3ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು
8:3 ವಿಮೋ. 30. 1, 3; ಪ್ರಕ. 9:13:
ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ
8:3 ಪ್ರಕ. 5:8:
ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.
4ಆಗ ಧೂಪದ ಹೊಗೆಯು ದೇವದೂತನ ಕೈಯಿಂದ ಹೊರಟು
8:4 ಕೀರ್ತ. 141:2:
ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ ದೇವರ ಸನ್ನಿಧಿಗೆ ಏರಿಹೋಯಿತು.
5ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು
8:5 ಯಾಜ. 16:12:
ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ
8:5 ಪ್ರಕ. 4:5:
ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು.

ಏಳು ತುತ್ತೂರಿಗಳು

6ಏಳು ತುತ್ತೂರಿಗಳನ್ನು ಹಿಡಿದಿರುವ ಏಳು ಮಂದಿ ದೇವದೂತರು ತುತ್ತೂರಿಗಳನ್ನು ಊದಲು ಸಿದ್ಧರಾದರು.

7ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು
8:7 ಯೋವೇ. 2:30.
ರಕ್ತ ಮಿಶ್ರಿತವಾದ
8:7 ವಿಮೋ. 9:23, 24; ಕೀರ್ತ. 18:12, 13; ಯೆರೆ. 38:22:
ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ
8:7 ಪ್ರಕ. 8:8-12; 9:15, 18; 12:4; ಯೆರೆ. 5:2; ಜೆಕ. 13:8, 9:
ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು.
8:7 ಯೆಶಾ. 2:13; ಪ್ರಕ. 9:4:
ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು.

8ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ
8:8 ಯೆರೆ. 51:25; ಮಾರ್ಕ. 11:23:
ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ
8:8 ಪ್ರಕ. 11:6; ವಿಮೋ. 7:17, 19
ರಕ್ತವಾಯಿತು.
9
8:9 ಪ್ರಕ. 16:3; ವಿಮೋ. 7:20, 21:
ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗವು ಸತ್ತವು ಮತ್ತು
8:9 ಯೆಶಾ. 2:16:
ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗವು ನಾಶವಾದವು.

10ಮೂರನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ
8:10 ಪ್ರಕ. 9:1; ಯೆಶಾ. 14:12:
ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ
8:10 ಪ್ರಕ. 14:7; 16:4:
ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು.
11ಆ ನಕ್ಷತ್ರದ ಹೆಸರು
8:11 ಕಹಿಯಾದ ಒಂದು ಜಾತಿಯ ಸಸ್ಯ. ಔಷಧಗಳ ತಯಾರಿಕೆಗೆ ಬಳಸುವ ಸಸಿ ಅಥವಾ ಗಿಡ.
ಮಾಚಿಪತ್ರೆ. ನೀರಿನ ಮೂರರಲ್ಲಿ ಒಂದು ಭಾಗ
8:11 ಧರ್ಮೋ. 29:18; ಯೆರೆ. 9:15; 3:15:
ಮಾಚಿಪತ್ರೆಯಂತೆ ವಿಷವಾಯಿತು ಮತ್ತು ಆ
8:11 ವಿಮೋ. 15:23:
ನೀರು ಕಹಿಯಾದ್ದರಿಂದ ಅನೇಕರು ಸತ್ತುಹೋದರು.

12ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ
8:12 ವಿಮೋ. 10:21-23; ಯೆಶಾ. 13:10; 30. 26; ಪ್ರಕ. 8:10:
ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು.

ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, <<ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ
8:13 ಪ್ರಕ. 9:12; 11:14:
ಕೇಡು, ಕೇಡು, ಕೇಡು>> ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.

13

Copyright information for KanULB