Revelation of John 9

1ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ
9:1 ಅಥವಾ, ನಕ್ಷತ್ರದವನೊಬ್ಬನನ್ನು; ಪ್ರಕ. 8:10; ಯೆಶಾ. 14:12; ಲೂಕ. 10:18; ಪ್ರಕ. 12:9:
ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ
9:1 ಪ್ರಕ. 9:2, 11; 11:7; 17:8; 20:1, 3. ಅಧೋಲೋಕವೆಂಬ ಅಭಿಪ್ರಾಯವುಳ್ಳ ಮೂಲದಲ್ಲಿನ ಪದವು ಲೂಕ 8:31; ರೋಮಾ. 10:7 ಈ ವಚನಗಳಲ್ಲಿಯೂ ಉಪಯೋಗಿಸಲ್ಪಟ್ಟಿದೆ.
ಅಧೋಲೋಕಕ್ಕೆ ಹೋಗುವ
9:1 ಅಗಾಧ ಸ್ಥಳ, ಅಂಧಕಾರದ ಸ್ಥಳ.
ಕೂಪದ
9:1 ಪ್ರಕ. 1:18:
ಬೀಗದ ಕೈ ಕೊಡಲ್ಪಟ್ಟಿತು.
2ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ
9:2 ಯೆಶಾ. 34:10:
ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಾಗಿ ಹೋದವು.

3ಹೊಗೆಯೊಳಗಿಂದ
9:3 ವಿಮೋ. 10:4, 5, 12, 15; ಯೋವೇ. 2:2:
ಮಿಡಿತೆಗಳು ಭೂಮಿಯ ಮೇಲೆ ಹೊರಟುಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಇರುವ ಶಕ್ತಿಯ ಪ್ರಕಾರ ಅವುಗಳಿಗೆ ಶಕ್ತಿಯು ಕೊಡಲ್ಪಟ್ಟಿತು.
4
9:4 ಪ್ರಕ. 8:7:
ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ,
9:4 ಪ್ರಕ. 7:2, 3; ಯೆಹೆ. 9:4:
ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.

5ಅವರನ್ನು ಕೊಲ್ಲದೆ
9:5 ವ. 10:
ಐದು ತಿಂಗಳುಗಳವರೆಗೂ ಹಿಂಸಿಸುವುದಕ್ಕೆ ಅಧಿಕಾರವು ದೊರೆಯಿತು. ಅವರಿಗುಂಟಾದ ಯಾತನೆಯು ಮನುಷ್ಯನಿಗೆ ಚೇಳು ಕಡಿತದಿಂದುಂಟಾಗುವ ಯಾತನೆಗೆ ಸಮಾನವಾಗಿತ್ತು.
6ಆ ಕಾಲದಲ್ಲಿ
9:6 ಯೋಬ. 3:21; 7:15, 16; ಯೆರೆ. 8:3:
ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು,
9:6 ಪ್ರಕ. 6:16:
ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು.

7
9:7 ಯೋವೇ. 2:4-7:
ಆ ಮಿಡಿತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು.
9:7 ನಹೂ. 3:17:
ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆಯೂ,
9:7 ದಾನಿ. 7:8:
ಅವುಗಳ ಮುಖಗಳು ಮನುಷ್ಯರ ಮುಖಗಳಂತೆಯೂ ಇದ್ದವು.
8ಅವುಗಳ ಕೂದಲು ಸ್ತ್ರೀಯರ ಕೂದಲಿನಂತೆಯೂ
9:8 ಯೋವೇ. 1:6:
ಹಲ್ಲುಗಳು ಸಿಂಹದ ಹಲ್ಲುಗಳಂತೆಯೂ ಇದ್ದವು.
9ಅವುಗಳಿಗೆ ಉಕ್ಕಿನ ಕವಚಗಳಂತಿದ್ದ ಕವಚಗಳು ಇದ್ದವು.
9:9 ಯೋವೇ. 2:5:
ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ರಥಾಶ್ವಗಳ ಶಬ್ದದಂತೆ ಇತ್ತು.

10ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ, ಕೊಂಡಿಗಳೂ ಇದ್ದವು. ಮನುಷ್ಯರನ್ನು
9:10 ವ. 5:
ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವುದು.
11
9:11 ಯೋಬ. 18:14; ಜ್ಞಾ. 30. 27; ಎಫೆ. 2:2:
ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ
9:11 ಯೋಬ. 26:6:
ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ
9:11 ಅಂದರೆ, ನಾಶ ಮಾಡುವವನು, ಸಂಹಾರಕನು.
ಅಪೊಲ್ಲುವೋನನೆಂತಲೂ ಹೆಸರುಂಟು.

12
9:12 ಪ್ರಕ. 8:13; 11:14:
ಮೊದಲನೆಯ ವಿಪತ್ತು ಕಳೆದು ಹೋಯಿತು. ಇಗೋ, ಇನ್ನೂ ಎರಡು ವಿಪತ್ತುಗಳು ಅದರ ಬೆನ್ನಹಿಂದೆಯೇ ಬಂದವು.

13ಆರನೆಯ ದೇವದೂತನು ತುತ್ತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಯ
9:13 ವಿಮೋ. 30:3. ಪಾಠಾಂತರ:ನಾಲ್ಕು ಕೊಂಬುಗಳಿಂದ.
ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು.
14ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ,
9:14 ಪ್ರಕ. 16:12:
<<ಯೂಫ್ರಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ
9:14 ಪ್ರಕ. 7:1:
ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು>> ಎಂದು ಹೇಳಿತು.
15ಆಗ
9:15 ಪ್ರಕ. 8:7:
ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು.

16ಕುದುರೆ ದಂಡಿನವರ ಸಂಖ್ಯೆಯು
9:16 ಕೀರ್ತ. 68:17; ದಾನಿ. 7:10:
ಇಪ್ಪತ್ತುಕೋಟಿ ಎಂದು
9:16 ಪ್ರಕ. 7:4:
ನನಗೆ ಕೇಳಿಸಿತು.
17ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ, ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು
9:17 1 ಪೂರ್ವ. 12:8; ಯೆಶಾ. 5:28, 29:
ಸಿಂಹಗಳ ತಲೆಗಳಂತಿದ್ದವು.

18ಅವುಗಳ ಬಾಯಿಂದ ಹೊರಟ ಆ ಬೆಂಕಿ, ಹೊಗೆ, ಗಂಧಕ ಎಂಬ ಮೂರು ಉಪದ್ರವಗಳಿಂದ
9:18 ಪ್ರಕ. 8:7:
ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗವು ಹತವಾಯಿತು.
19ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇದ್ದವು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದಲೇ ಕೇಡನ್ನುಂಟುಮಾಡುವುದು.

20ಉಪದ್ರವಗಳಿಂದ ಸಾಯದೆ ಉಳಿದ ಜನರು
9:20 ಧರ್ಮೋ. 31:29; ಯೆರೆ. 1:16; 25:14:
ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು
9:20 ಪ್ರಕ. 2:21:
ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ
9:20 1 ಕೊರಿ. 10:20:
ಪೂಜೆಯನ್ನೂ
9:20 ಕೀರ್ತ. 115:4-7; 135:15-17; ದಾನಿ. 5:4, 23:
ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.
ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ,
9:21 ಪ್ರಕ. 21:8; 22:15; ಗಲಾ. 5:20:
ಮಾಟ, ಜಾರತ್ವ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ.

21

Copyright information for KanULB