Romans 12

ದೇವಜನರು ನಡೆದುಕೊಳ್ಳಬೇಕಾದ ರೀತಿ

1ಆದ್ದರಿಂದ ಪ್ರಿಯರೇ, ದೇವರ ಕನಿಕರವನ್ನು ನೆನಪಿಸುತ್ತಾ,
12:1 ರೋಮಾ. 6:13,16,19; 1 ಕೊರಿ. 6:20
ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ
12:1 ಪವಿತ್ರವಾಗಿಯೂ
ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
2
12:2 1 ಪೇತ್ರ 1:14; 1 ಯೋಹಾ 2:15
ಇಹಲೋಕದ ನಡವಳಿಕೆಯನ್ನು ಅನುಸರಿಸದೆ
12:2 ತೀತ 3:5; ಎಫೆ. 4:23; ಕೊಲೊ. 3:10
ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ
12:2 1 ಥೆಸ. 4:3
ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.

3ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ
12:3 ರೋಮಾ. 11:20; 12:16
ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ
12:3 1 ಕೊರಿ. 7:17; ಎಫೆ. 4:7
ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.

4ಯಾಕೆಂದರೆ
12:4 1 ಕೊರಿ. 12:12-14; ಎಫೆ. 4:4,16
ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ
5ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ
12:5 1 ಕೊರಿ. 12:20 ಎಫೆ. 4:4,12
ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.

6
12:6 1 ಕೊರಿ. 12:4,7-11; 7:7; 1 ಪೇತ್ರ 4:10,11
ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ.
12:6 1 ಕೊರಿ. 12:10
ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ.
7
12:7 ಅ. ಕೃ. 6:1
ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ.
8ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ.
12:8 2 ಕೊರಿ. 8:2; 9:7,11,13
ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ.
12:8 1 ತಿಮೊ. 5:17
ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.

9
12:9 2 ಕೊರಿ. 6:6; 1 ತಿಮೊ. 1:5; 1 ಪೇತ್ರ 1:22
ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ.
12:9 ಕೀರ್ತ. 97:10; ಅಮೋ. 5:15; 1 ಥೆಸ. 5:21,22
ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.
10
12:10 ಇಬ್ರಿ. 13:1
ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ.
12:10 ರೋಮಾ. 13:7; ಫಿಲಿ. 2:3
ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.

11ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ
12:11 ಅ. ಕೃ. 18:25
ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.
12
12:12 ರೋಮಾ. 5:2
ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
13ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.

14
12:14 ಮತ್ತಾ 5:44; 1 ಪೇತ್ರ 3:9
ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ.
15
12:15 1 ಕೊರಿ. 12:26
ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.
16
12:16 ರೋಮಾ. 15:5; 2 ಕೊರಿ. 13:11; ಫಿಲಿ. 2:2; 4:2
ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ
12:16 ರೋಮಾ. 12:3; ಕೀರ್ತ. 131:1; ಯೆರೆ. 45:5
ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ.
12:16 ರೋಮಾ. 11:25
ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.

17
12:17 ಜ್ಞಾ. 20:22; ಮತ್ತಾ 5:39; 1 ಥೆಸ. 5:15
ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ.
12:17 2 ಕೊರಿ. 8:21
ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.
18ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ
12:18 ಮಾರ್ಕ 9:50
ಎಲ್ಲರ ಸಂಗಡ ಸಮಾಧಾನದಿಂದಿರಿ.

19ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ
12:19 ಧರ್ಮೋ. 32:35; ಇಬ್ರಿ. 10:30
<< <ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು> ಎಂದು ಕರ್ತನು ಹೇಳುತ್ತಾನೆಂಬುದಾಗಿ>> ಬರೆದಿದೆ.
20ಹಾಗಾದರೆ
12:20 ಜ್ಞಾ. 25:21,22; ಲೂಕ 6:27
<<ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು>>
12:20 ತನ್ನ ತಪ್ಪಿನ ಅರಿವು ಅವನಿಗೆ ಆಗುವಂತೆ
.
ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಗೆಲ್ಲಿರಿ.

21

Copyright information for KanULB