Romans 14

ಇನೊಬ್ಬರಿಗೆ ತೀರ್ಪುಮಾಡಬೇಡಿರಿ

(1 ಕೊರಿ. 8—10)

1
14:1 ರೋಮಾ. 15:1; 1 ಕೊರಿ. 8:9-11; 9:22
ನಂಬಿಕೆಯಲ್ಲಿ ದೃಢವಿಲ್ಲದವರನ್ನು ಸೇರಿಸಿಕೊಳ್ಳಿರಿ, ಆದರೆ ಸಂದೇಹಾಸ್ಪದವಾದ ವಿಷಯಗಳ ಬಗ್ಗೆ ತೀರ್ಪುಮಾಡಬೇಡಿರಿ.
2ಒಬ್ಬನು ಯಾವುದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ.

3ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ? 4
14:4 ಯಾಕೋಬ 4:12
ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.

5
14:5 ಗಲಾ. 4:10
ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿನಗಳನ್ನೂ ವಿಶೇಷವೆಂದೆಣಿಸುತ್ತಾನೆ;
14:5 ರೋಮಾ. 14:23
ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ಚಂಚಲಪಡದೆ ದೃಢವಾಗಿರಲಿ.
6ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ;
14:6 1 ಕೊರಿ. 10:30,31; 1 ತಿಮೊ. 4:3,4
ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.

7
14:7 2 ಕೊರಿ. 5:15; ಗಲಾ. 2:20; 1 ಪೇತ್ರ 4:2
ನಮ್ಮಲ್ಲಿ ಯಾರು ತನಗಾಗಿ ಬದುಕುವುದು ಇಲ್ಲ. ತನಗಾಗಿ ಸಾಯುವುದೂ ಇಲ್ಲ,
8ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ;
14:8 ಫಿಲಿ. 1:20
ಬದುಕಿದರೂ ಸತ್ತರೂ ನಾವು ಕರ್ತನವರೇ.
9ಯಾಕೆಂದರೆ
14:9 ಅ. ಕೃ. 10:42; ಪ್ರಕ. 20:12
ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು.

10ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು?
14:10 2 ಕೊರಿ. 5:10
ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.
11ಪವಿತ್ರ ಶಾಸ್ತ್ರದಲ್ಲಿ:
14:11 ಯೆಶಾ. 45:23; ಫಿಲಿ. 2:10,11
<<ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ>> ಎಂದು ಬರೆದಿದೆ.

12ಹೀಗಿರಲಾಗಿ
14:12 ಮತ್ತಾ 12:36; 16:27; 1 ಪೇತ್ರ 4:5
ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.
13ಆದಕಾರಣ, ಇನ್ನು ಮೇಲೆ
14:13 ಮತ್ತಾ 7:1
ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.

14
14:14 ರೋಮಾ. 14:2; 20
ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ
14:14 1 ಕೊರಿ. 8:7,10
ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.

15ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾದರೆ ನೀನು ಪ್ರೀತಿಗೆ ತಕ್ಕಂತೆ ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ
14:15 1 ಕೊರಿ. 8:11; ರೋಮಾ. 14:20
ಅವನನ್ನು ನಿನಗೆ ಇಷ್ಟವಾದ ಆಹಾರದ ನಿಮಿತ್ತ ಕೆಡಿಸಬಾರದು.

16ನಿಮಗಿರುವ ಉತ್ತಮ ಕ್ರಮಗಳು ದೂಷಣೆಗೆ ಆಸ್ಪದವಾಗಬಾರದು. 17ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ
14:17 1 ಕೊರಿ. 6:9
ನೀತಿಯೂ,
14:17 ಗಲಾ. 5:22
ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.

18ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ. 19ಆದ್ದರಿಂದ ನಾವು
14:19 1 ಕೊರಿ. 7:15; 2 ತಿಮೊ. 2:22; ಇಬ್ರಿ. 12:4
ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.

20
14:20 ರೋಮಾ. 14:15
ದೇವರು ಕಟ್ಟಿದ್ದನ್ನು ನೀನು ಆಹಾರದ ನಿಮಿತ್ತವಾಗಿ ಕೆಡವಬೇಡ.
14:20 ತೀತ 115; ರೋಮಾ. 14:14
ಎಲ್ಲಾ ಪದಾರ್ಥಗಳೂ ಶುದ್ಧವೇ;
14:20 1 ಕೊರಿ. 8:9,13
ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವುದು ಕೆಟ್ಟದ್ದು.
21ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.

22ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ಅದು ನಿನ್ನ ಮಟ್ಟಿಗೆ ಮಾತ್ರ ಇರಲಿ.
14:22 1 ಯೋಹಾ 3:21
ತಾನು ಒಪ್ಪಿದ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು.
ಸಂಶಯಪಟ್ಟು ಊಟಮಾಡುವವನು ಸಂಶಯದಿಂದ ತಿನ್ನುವ ಕಾರಣ ತನ್ನ ಊಟದ ವಿಷಯದಲ್ಲಿ ನಂಬಿಕೆಯಿಲ್ಲದೆ ದೋಷಿಯಾಗಿದ್ದಾನೆ.
14:23 ಸಂಶಯಪಟ್ಟು ಮಾಡುವುದೆಲ್ಲಾ ಪಾಪ
ನಂಬಿಕೆಯಿಂದ ರೂಪುಗೊಳ್ಳದಿರುವುದೆಲ್ಲವೂ ಪಾಪವೇ ಆಗಿದೆ.

23

Copyright information for KanULB