Romans 4

ಅಬ್ರಹಾಮನು ನಂಬಿಕೆಯಿಂದಲೇ ನೀತಿವಂತನಾದನೆಂಬ ವಾದ

1ಹಾಗಾದರೆ ವಂಶಾನುಕ್ರಮವಾಗಿ ನಮಗೆ
4:1 ಯೆಶಾ. 51:2; ರೋಮಾ. 4:16
ಮೂಲಪಿತೃವಾಗಿರುವ ಅಬ್ರಹಾಮನು ಈ ವಿಷಯದಲ್ಲಿ ಏನು ಪಡೆದುಕೊಂಡನೆಂದು ಹೇಳಬೇಕು?
2ಅಬ್ರಹಾಮನು ಪುಣ್ಯಕ್ರಿಯೆಯಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವುದಕ್ಕೆ ಅವನಿಗೆ ಆಸ್ಪದವಿರುವುದು; ಆದರೆ
4:2 1 ಕೊರಿ. 1:31
ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಆಸ್ಪದವಿರುವುದಿಲ್ಲ.
3ಇದರ ವಿಷಯದಲ್ಲಿ ಧರ್ಮಶಾಸ್ತ್ರವು ಹೇಳುವುದನ್ನು ಆಲೋಚಿಸಿರಿ,
4:3 ಆದಿ. 15:6; ರೋಮಾ. 4:9, 22; ಗಲಾ. 3:6; ಯಾಕೋಬ 2:23
<<ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು>> ಎಂದು ಹೇಳುತ್ತದೆ.

4ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃಪೆಯಿಂದ ದೊರಕುವಂಥದೆಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು. 5ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ
4:5 ರೋಮಾ. 3:22
ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.

6ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗಂದರೆ, 7
4:7 ಕೀರ್ತ. 32:1
<<ಯಾರ ಅಪರಾಧಗಳು ಪರಿಹಾರವಾಗಿದೆಯೋ, ಯಾರ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಅವರೇ ಧನ್ಯರು.
8
4:8 2 ಕೊರಿ. 5:19
ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವುದಿಲ್ಲವೋ ಆ ಮನುಷ್ಯನೇ ಧನ್ಯನು.>>

9
4:9 ರೋಮಾ. 3:30
ಈ ಶುಭವು ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೆ ಸಹ ಉಂಟೋ?
4:9 ರೋಮಾ. 4:3
<<ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತು>> ಎಂಬುದಾಗಿ ನಾವು ಹೇಳುತ್ತೇವೆ.
10ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವುದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವುದಕ್ಕೆ ಮೊದಲೇ ಎಣಿಸಲ್ಪಟ್ಟಿತು.

11ಅನಂತರ
4:11 ಆದಿ. 17:10,16
ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ
4:11 ರೋಮಾ. 4:12,16
ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.
12ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.

ನಂಬಿಕೆಯಿಂದ ವಾಗ್ದಾನವನ್ನು ಹೊಂದಿದ್ದು

13
4:13 ಆದಿ. 17:4-6; 22:17,18
ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ.
14ಧರ್ಮಶಾಸ್ತ್ರವನ್ನು ಅನುಸರಿಸುವವರು ಲೋಕಕ್ಕೆ ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವು ನಿರರ್ಥಕವಾಯಿತು. 15ಯಾಕೆಂದರೆ
4:15 ರೋಮಾ. 7:7; 10:25; 2 ಕೊರಿ. 7:9; ಗಲಾ. 3:10
ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ
4:15 ರೋಮಾ. 3:20; ಗಲಾ. 3:19
ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ.

16ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೇಲ್ಲರ ತಂದೆಯಾದ
4:16 ಗಲಾ. 3:22
ಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.
17
4:17 ಆದಿ. 17:5
<<ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು>> ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು
4:17 1 ಕೊರಿ. 1:28
ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕ್ಕೆಯಿಟ್ಟನು.

18
4:18 ಆದಿ. 15:5
<<ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು>> ಎಂಬುದಾಗಿ ತನಗೆ ಹೇಳಲ್ಪಟ್ಟ ಆ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ಅಬ್ರಹಾಮನು ತಾನು ಬಹು ಜನಾಂಗಗಳಿಗೆ ಪಿತನಾಗುವೆನೆಂದು ನಿರೀಕ್ಷೆಗೆ ವಿರುದ್ಧವಾಗಿ ನಿರೀಕ್ಷಿಸಿ ನಂಬಿದನು.
19
4:19 ಆದಿ. 17:17
ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು
4:19 ಇಬ್ರಿ. 11:12
ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ
4:19 ಆದಿ. 18:11
ಸಾರಳಿಗೆ ಗರ್ಭಕಾಲ ಕಳೆದು ಹೋಯಿತೆಂದು ಪರಿಗಣಿಸಿದ್ದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.

20ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ. 21ದೇವರನ್ನು ಘನಪಡಿಸುವವನಾಗಿ
4:21 ಆದಿ. 18:14
ಆತನು ತನ್ನ ವಾಗ್ದಾನವನ್ನು ನೆರವೇರಿಸುವುದಕ್ಕೆ ಸಮರ್ಥನೆಂದು
4:21 ನಂಬಿಕೆಯಿಂದಲೇ ಬಲಹೊಂದಿ
ಪೂರ್ಣದೃಢತೆಯುಳ್ಳವನಾದನು.
22ಆದ್ದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು.

23ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತೆಂಬುದು ಅವನಿಗೋಸ್ಕರ ಮಾತ್ರವಲ್ಲದೆ
4:23 ರೋಮಾ. 15:4; 1 ಕೊರಿ. 9:9,10; 6:11; 2 ತಿಮೊ. 3:16,17
ನಮಗೋಸ್ಕರವೂ ಬರೆದಿರುವುದು.
24ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ
4:24 ಅ. ಕೃ. 2:24
ಎಬ್ಬಿಸಿದ ದೇವರನ್ನು
4:24 ರೋಮಾ. 10:9; 1 ಪೇತ್ರ 1:21
ನಂಬುವ ನಮಗೂ ಆ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು.
4:25 ರೋಮಾ. 5:6,8; 8:32; ಯೆಶಾ. 53:5,6; ಮತ್ತಾ. 20:28; ಗಲಾ. 1:4
ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು
4:25 ರೋಮಾ. 5:18
ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.

25

Copyright information for KanULB