Romans 6

ಸತ್ತು ಜೀವಿತನಾಗಿ ಎದ್ದ ಕ್ರಿಸ್ತನಲ್ಲಿ ಐಕ್ಯವಾದವರು

1ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು. 2
6:2 ರೋಮಾ. 3:8; 6:11; 7:4,6; ಗಲಾ. 2:19; ಕೊಲೊ. 2:20; 3:3; 1 ಪೇತ್ರ 2:24
ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ?
3
6:3 ಗಲಾ. 3:27
ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?

4ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ
6:4 ಕೊಲೊ. 2:12
ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ
6:4 ರೋಮಾ. 6:9; 8:11; ಅ. ಕೃ. 2:24
ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು
6:4 2 ಕೊರಿ. 5:17; ಗಲಾ. 15; ಎಫೆ. 4:23,24; ಕೊಲೊ. 3:10
ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
5ಹೇಗಂದರೆ ನಾವು ಆತನ ಮರಣಕ್ಕೆ
6:5 ಫಿಲಿ. 3:10,11
ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.

6ನಮಗೆ ತಿಳಿದಿರುವಂತೆ, ನಮ್ಮ
6:6 ಎಫೆ. 4:22; ಕೊಲೊ. 3:9
ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು
6:6 ಗಲಾ. 2:20; 5:24; 6:14
ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.
7
6:7 ರೋಮಾ. 6:18
ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ.

8ಇದಲ್ಲದೆ
6:8 2 ತಿಮೊ. 2:11; 2 ಕೊರಿ. 4:10; 13:4
ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ.
9ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ
6:9 ಅ. ಕೃ. 13:34; ಪ್ರಕ. 1:18
ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ.

10
6:10 ಇಬ್ರಿ. 7:27
ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ,
11ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ
6:11 ರೋಮಾ. 6:2
ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ.

ನಂಬಿದವರು ಪಾಪದ ದಾಸತ್ವದಿಂದ ಬಿಡುಗಡೆಯಾಗಿ ದೇವರಿಗೆ ದಾಸರಾಗುವರು

12ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ. 13ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ
6:13 ರೋಮಾ. 12:1
ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.
14ಯಾಕೆಂದರೆ
6:14 ರೋಮಾ. 8:2; 12
ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು
6:14 ನೇಮಗಳಿಗೆ
ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.

15ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು
6:15 ರೋಮಾ. 6:1
ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.
16ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ
6:16 ರೋಮಾ. 6:20
ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ

17ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ, 18
6:18 ರೋಮಾ. 6:22; 8:2
ಪಾಪದಿಂದ ಬಿಡುಗಡೆಯನ್ನು ಹೊಂದಿ
6:18 ರೋಮಾ. 6:22
ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ.

19ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು
6:19 ರೋಮಾ. 3:5
ಲೋಕದ ರೀತಿಯಾಗಿ ಮಾತನಾಡುತ್ತೇನೆ.
6:19 ರೋಮಾ. 6:13
ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.
20ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಗೆ ಒಳಗಾಗಿರಲಿಲ್ಲ. 21ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ
6:21 ರೋಮಾ. 7:5
ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ.
6:21 ರೋಮಾ. 1:32; 8:6, 13; ಜ್ಞಾ. 14:12; ಗಲಾ. 6:8
ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?

22ಈಗಲಾದರೋ ನೀವು
6:22 ರೋಮಾ. 6:18
ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ
6:22 1 ಕೊರಿ. 7:22; 1 ಪೇತ್ರ 2:16
ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.
ಯಾಕೆಂದರೆ
6:23 ರೋಮಾ. 5:12; 2:8
ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.

23

Copyright information for KanULB