Titus 2

ಕ್ರೈಸ್ತರೆಲ್ಲರೂ ಸನ್ನಡತೆಯವರಾಗಿರಬೇಕೆಂಬ ಸ್ವಸ್ಥ ಭೋದನೆ

1ನಿನಗೆ ದೊರೆತ ಸ್ವಸ್ಥ ಭೋಧನೆಗೆ ಅನುಗುಣವಾಗಿ ಎಲ್ಲರು ಸನ್ನಡತೆಯಿಂದ ನಡೆಯುವಂತೆ ಉಪದೇಶಮಾಡು. 2ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯುಳ್ಳವರು ಆಗಿರಬೇಕೆಂದು ಬೋಧಿಸು.

3ಹಾಗೆಯೇ, ವೃದ್ಧ ಸ್ತ್ರೀಯರು
2:3 1 ತಿಮೊ. 3:11
ಚಾಡಿಹೇಳುವವರೂ
2:3 1 ತಿಮೊ. 3:8; 5:2
ಮದ್ಯಕ್ಕೆ ಅಧೀನರಾಗಿರದೆ
2:3 1 ತಿಮೊ. 2:9
ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ ಆಗಿರಬೇಕು.
4ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ,
2:4 1 ತಿಮೊ. 6:1
ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕಉಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ
5
2:5 1 ತಿಮೊ. 5:14
ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ
2:5 ಆದಿ 3:16
ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು.

6ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು
2:6 1 ತಿಮೊ 5:1
ನೀನು ಯೌವನಸ್ಥರನ್ನು ಎಚ್ಚರಿಸು.
7ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ
2:7 2 ಕೊರಿ 11:3
ಸತ್ಯವೂ
2:7 1 ತಿಮೊ 2:2
ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ
2:7 1 ತಿಮೊ 6:3
ಸುಬುದ್ಧಿಯೂ ಇರಬೇಕು;
8
2:8 ನೆಹೆ 5:9; 1 ತಿಮೊ 5:14; 1 ಪೇತ್ರ 2:12; 3:16
ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು.

9
2:9 1 ಪೇತ್ರ 2:18; ಕೊಲೊ 3:22
ಸೇವಕರು ತಮ್ಮ ಯಜಮಾನರಿಗೆ ವಿಧೇಯರಾಗಿದ್ದು ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಪಡುತ್ತಾ
10ಎದುರುತ್ತರಕೊಡದೆ, ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ
2:10 ಮತ್ತಾ 5:16; ಫಿಲಿ 2:15
ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು.

11ಏಕೆಂದರೆ
2:11 1 ತಿಮೊ 2:4
ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು
2:11 ತೀತ 3:4
ಪ್ರತ್ಯಕ್ಷವಾಯಿತು;
12ಅದು ಭಕ್ತಿ ಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ
2:12-13 ತೀತ 1:2
ನಿರೀಕ್ಷೆಯನ್ನು,
13ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.

14
2:14 ಕೀರ್ತ 130:8; 1 ಪೇತ್ರ 1:18-19
ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ
2:14 ತೀತ 3:8; ಎಫೆ 2:10
ಸತ್ಕ್ರಿಯೆಗಳಲ್ಲಿ ಆಸಕ್ತರಾದ
2:14 ಯೆಹೆ 37:23; ವಿಮೋ 19:5
ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ
2:14 1 ತಿಮೊ 2:6
ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.

ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ
2:15 ತೀತ 1:13; 1 ತಿಮೊ 5:20
ಖಂಡಿಸುತ್ತಾ ಇರು.
2:15 1 ತಿಮೊ 4:12
ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.

15

Copyright information for KanULB