Titus 3

ಕ್ರೈಸ್ತ ವಿಶ್ವಾಸಿಗಳ ಒಳ್ಳೆ ನಡತೆ ಭೋದನೆ

1
3:1 ರೋಮಾ 13:1; 1 ಪೇತ್ರ 2:13
ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಒಳ್ಳೆಯ ಕಾರ್ಯಗಳನ್ನು ಮುಂದುವರಿಸು, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ,
2ಯಾರನ್ನೂ ದೂಷಿಸದೆ,
3:2 1 ತಿಮೊ 3:3
ನಿಂದಿಸದೆ ಕುತರ್ಕ ಮಾಡದೆ
3:2 2 ತಿಮೊ 2:25
ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.

3
3:3 1 ಕೊರಿ 6:11
ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.

4ಆದರೆ ನಮ್ಮ ರಕ್ಷಕನಾದ ದೇವರ
3:4 ರೋಮಾ 2:4
ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,
5
3:5 ರೋಮಾ 3:27
ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ
3:5 ಎಫೆ 5:27; ಯೋಹಾ 3:5; 1 ಕೊರಿ 6:11; 1 ಪೇತ್ರ 3:21;
ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ
3:5 ರೋಮಾ 12:2
ನವೀಕರಣದ ಮೂಲಕವಾಗಿಯೂ ಆತನು
3:5 ಎಫೆ 2:4; 1 ಪೇತ್ರ 1:3
ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.

6
This verse is empty because in this translation its contents have been moved to form part of verse Tit 3:7.
In this translation, this verse contains text which in some other translations appears in verses Tit 3:6-Tit 3:7.
7ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು
3:6-7 ತೀತ 1:2
ನಿತ್ಯಜೀವದ ನಿರೀಕ್ಷೆಗೆ
3:6-7 ರೋಮಾ. 8:17
ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಹೇರಳವಾಗಿ
3:6-7 ಯೋವೇ. 2:28; ಅ. ಕೃ 2:33; 10:45. ರೋಮಾ 5:5
ಸುರಿಸಿದನು.

8
3:8 1 ತಿಮೊ. 1:15
ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.

9ಆದರೆ ಬುದ್ಧಿಯಿಲ್ಲದ
3:9 1 ತಿಮೊ. 6:4
ತರ್ಕಗಳಿಂದಲೂ,
3:9 1 ತಿಮೊ. 1:4
ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ವಾದಗಳಿಂದಲೂ ದೂರವಾಗಿರು;
3:9 2 ತಿಮೊ 2:14
ಅವು ನಿಷ್ಪ್ರಯೋಜಕವೂ ವ್ಯರ್ಥವೂ ಆಗಿವೆ.
10ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು
3:10 ಮತ್ತಾ. 18:15. 2 ಥೆಸ 3:15; ಯಾಕೋಬ 5:19
ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು;
11ಅಂಥವನು ಸನ್ಮಾರ್ಗದಿಂದ ದೂರವಾದವನೂ ಪಾಪಮಾಡುವವನೂ ಆಗಿದ್ದಾನೆ; ತಾನು ಶಿಕ್ಷೆಗೆ ಅರ್ಹನೆಂದು ಅವನ ಮನಸ್ಸೇ ನಿರ್ಣಯ ಮಾಡುತ್ತದೆ.

ಕಡೆ ಮಾತುಗಳು

12ನಾನು
3:12 2 ತಿಮೊ. 4:10
ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡಿದ್ದರಿಂದ ಅರ್ತೆಮನನ್ನಾಗಲಿ
3:12 2 ತಿಮೊ. 4:12
ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನಿಸು.
13ನ್ಯಾಯಶಾಸ್ತ್ರಿಯಾದ ಜೇನನನ್ನೂ ಮತ್ತು
3:13 ಅ. ಕೃ 18:24
ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಕಳುಹಿಸಿಕೂಡು; ಅವರಿಗೇನೂ ಕೊರತೆಯಾಗಬಾರದು.

14ನಮ್ಮ ಜನರು ಸಕ್ಕ್ರಿಯಹೀನರಾಗದಂತೆ ಭೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರಿತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.

15ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆಯುಳ್ಳವರಾಗಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಸಲ್ಲಿಸು.

3:15 ಕೊಲೊ 4:18
ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.
Copyright information for KanULB